ಹಾವೇರಿ | ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಗಳ ತನಿಖೆಗೆ ಎಸ್.ಐ.ಟಿ. ರಚನೆ: ಡಿವೈಎಫ್ಐ ಸ್ವಾಗತ

Date:

“ಪ್ರಾರಂಭಿದ ಹಂತದಲ್ಲೇ ಪ್ರಶ್ನೆಗೆ ಒಳಪಟ್ಟು ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದ ಅಸಹಜ ಸಾವುಗಳ ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸುತ್ತದೆ” ಎಂದು ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ತಿಳಿಸಿದ್ದಾರೆ.

ಹಾವೇರಿ ಪಟ್ಟಣದ ಪತ್ರಿಕಾ ಹೇಳಿಕೆ ನೀಡಿದ ಅವರು, “80ರ ದಶಕದಲ್ಲಿ ನಡೆದ ಪದ್ಮಲತಾ ಪ್ರಕರಣದ ಸಂದರ್ಭದಿಂದಲೇ ಡಿವೈಎಫ್ಐ ಅಲ್ಲಿನ ವಿದ್ಯಮಾನಗಳಿಗೆ ವಿರೋಧ ವ್ಯಕ್ತಪಡಿಸಿದೆ. ಹಲವು ಹಂತಗಳಲ್ಲಿ ನಡೆದ ಹೋರಾಟಗಳಲ್ಲಿ ಪಾಲ್ಗೊಂಡಿದೆ. ಆ ಹೋರಾಟಗಳ ನಂತರವಷ್ಟೇ ಸಿ.ಬಿ.ಐ. ತನಿಖೆಗೆ ಒಪ್ಪಿಸಲಾಗಿತ್ತು. ಹಲವು ವರ್ಷಗಳ ಹಿಂದೆ ಪ್ರಕರಣಗಳು ನಡೆದು ಉದ್ದೇಶಪೂರ್ವಕವಾಗಿ ಸಾಕ್ಷಿನಾಶ ಮಾಡಲಾಗಿದೆ ಎಂದೂ ಕುಖ್ಯಾತವಾಗಿದ್ದ ಪ್ರಕರಣಗಳು ಇರುವುದರಿಂದ ಕೂಲಂಕುಷವಾದ ತನಿಖೆ ನಡೆಯಬೇಕಿದೆ” ಎಂದು ಹೇಳಿದರು.

“ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಪ್ರಾರಂಭದ ದಿನಗಳಿಂದ ಪ್ರಕರಣಗಳ ಬೆನ್ನು ಹತ್ತಿ ಹೋರಾಟ ಪ್ರತಿಭಟನೆ ಗಳನ್ನು ಮಾಡಿದ ಸಂಘ, ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಸ್.ಐ.ಟಿ ಯು ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಲ ವಿಳಂಬ ಮಾಡದೇ ನಿರ್ದಿಷ್ಟ ಕಾಲಮಿತಿಯಲ್ಲಿ ತನಿಖೆ ನಡೆದು ಸತ್ಯವನ್ನು ಹೊರಗೆಳೆಯಬೇಕು. ಸಿ.ಬಿ.ಐ.ನ್ಯಾಯಾಲಯದ ತೀರ್ಪು ಸೂಚಿಸಿರುವಂತೆ ಸೌಜನ್ಯ ಪ್ರಕರಣದಲ್ಲಿ ಪ್ರಾಥಮಿಕ ಹಂತದಲ್ಲಿ ತನಿಖೆಯ ದಾರಿ ತಪ್ಪಿಸಲು, ಸಾಕ್ಷಿ ನಾಶ ಮಾಡಿದ ತನಿಖಾಧಿಕಾರಿಗಳನ್ನು ತೀವ್ರ ತನಿಖೆಗೆ ಒಳಪಡಿಸಿ, ಆರೋಪಿಗಳನ್ನು ಶಿಕ್ಷಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...