ಹಾವೇರಿ | ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಸಚಿವ ಎಚ್.ಕೆ.ಪಾಟೀಲ

Date:

ಜಿಲ್ಲೆಯ ರಾಣೇಬೆನ್ನೂರ ನಗರವು ಐತಿಹಾಸಿಕ ಪ್ರವಾಸಿ ತಾಣಗಳ ತಾಲೂಕಾಗಿದ್ದು, ಇಲ್ಲಿ ಹಲವಾರು ಐತಿಹಾಸಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ನೋಡಲು ಸಿಗುತ್ತವೆ. ಇವೆಲ್ಲವುಗಳನ್ನು ಐತಿಹಾಸಿಕ ಪ್ರವಾಸಿ ತಾಣಗಳನ್ನಾಗಿ ಮಾಡಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುವುದು” ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಹೇಳಿದರು.

ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ವಿವಿಧ ಪ್ರವಾಸ ತಾಣಗಳಿಗೆ ಭೇಟಿ ನೀಡಿ ಮಾತನಾಡಿದರು.

“ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ನಿರೀಕ್ಷೆಯಂತೆ ನಾನು ರಾಣೇಬೆನ್ನೂರ ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟು ಅಧ್ಯಯನ ಮಾಡಿ ಸಂಬಂಧಪಟ್ಟ ಇಲಾಖೆಯವರು ಈ ದಿಸೆಯಲ್ಲಿ ಏನು ಮಾಡಬೇಕು ಎಂಬುವುದನ್ನು ನಿರ್ಣಯ ಮಾಡುವುದಕ್ಕೆ ಬಂದಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದ ಮಲ್ಲಾಪುರ ಗುಡ್ಡಕ್ಕೆ ಬೆಳಿಗ್ಗೆ ಭೇಟಿ ನೀಡಿದ್ದೆವು. ಅದು ತುಂಬಾನೇ ಆಕರ್ಷಣಿಯವಾಗಿದೆ. ಮತ್ತೆ ಮತ್ತೆ ನೋಡಬೇಕೆನ್ನುವಷ್ಟು ಸುಂದರವಾಗಿದೆ. ‘ಈ ಸುಂದರ ಪರಿಸರದ ಸಂಪೂರ್ಣ ಅನುಭವವನ್ನು ಪಡೆಯುವಂತೆ ನಮ್ಮ ಭಾಗದ ಜನರಿಗೆ ಅನುಕೂಲ ಮಾಡಿಕೊಡಬೇಕು’ ಎನ್ನುವುದು ಈ ಭಾಗದ ಶಾಸಕರು, ಜಿಲ್ಲಾ ಅಧಿಕಾರಗಳ ಸಲಹೆಯಾಗಿದೆ. ಅದರಂತೆ ಅರೆ ಮಲ್ಲಾಪುರ ಬೆಟ್ಟವನ್ನು ಆಕರ್ಷಣಿಯ ಪ್ರವಾಸಿ ಕೇಂದ್ರವನ್ನಾಗಿ ಮಾಡಿ ಅಭಿವೃದ್ಧಿ ಪಡಿಸುವ ಇಚ್ಛಾಶಕ್ತಿ ಹೊಂದಿದ್ದೇವೆ. ಪ್ರಾರಂಭಿಕ ಹಂತದಲ್ಲಿ ಮಲ್ಲಾಪುರ ಬೆಟ್ಟಕ್ಕೆ ಪ್ರವಾಸಿಗರು ಆಗಮಿಸಲು ಸೂಕ್ತ ಸಾರಿಗೆ ವ್ಯವಸ್ಥೆ ಮಾಡಲಾಗುವುದು. ಆಗಸ್ಟ 15 ರಿಂದ ಕನಿಷ್ಠ 5 ಜೀಪ್‌ಗಳ ಮೂಲಕ ಯುವಕರು, ವಿದ್ಯಾರ್ಥಿಗಳಿಗೆ ಪ್ರವಾಸಿ ತಾಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಸುಂದರ ಪ್ರವಾಸಿ ತಾಣ ಮಾಡವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ” ತಿಳಿಸಿದರು.

ಬಳಿಕ ಸಚಿವರು ಐರಣಿ ಪ್ರವಾಸಿ ತಾಣಕ್ಕೆ ಭೇಟಿ ಕೊಟ್ಟು, ಇಲ್ಲಿಯ ಒಂದು ಪುರಾತನ ಕೋಟೆಯಿದ್ದು, ಅದು ತುಂಬಾನೇ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಆ ಕೋಟೆಯನ್ನು ಅಭಿವೃದ್ಧಿ ಪಡಿಸಿ ಮುಂದಿನ ಪೀಳಿಗೆಗೆ ಕೋಟೆ ಇರುವುದರ ಬಗ್ಗೆ ಗೊತ್ತುಪಡಿಸಬೇಕಾಗಿದೆ. ಆದ್ದರಿಂದ ಹಾವನೂರ ಮನೆತನಕ್ಕೆ ಸೇರಿದ ಐರಣಿ ಕೋಟೆಯನ್ನು ಜನರಲ್ಲಿ ಜಾಗೃತಿ ಮೂಡುವ ರೀತಿಯಲ್ಲಿ ತಕ್ಷಣಕ್ಕೆ ದುರಸ್ತಿಪಡಿಸಿ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮೊಹರಂ ಆಚರಣೆ; ಜು.5 ರಿಂದ ಮದ್ಯ ಮಾರಾಟ ನಿಷೇಧ

ಬಳಿಕ ಮಾಗೋಡದ ಭೀಮನ ದೋಣಿ. ಚೌಡಯ್ಯದಾನಪುರ ತಾಣಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. 

ಈ ಸಂದರ್ಭದಲ್ಲಿ ರಾಣೇಬೆನ್ನೂರ ಶಾಸಕ ಪ್ರಕಾಶ ಕೋಳಿವಾಡ, ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...