ಹಾವೇರಿ |  ‘ಆಪರೇಷನ್ಸ್ ಸಿಂಧೂರ’ ಕಾರ್ಯಾಚರಣೆ ಬೆಂಬಲಿಸಿ, ಲಕ್ಷ್ಮಿ ದೇವಿಗೆ ವಿಶೇಷ ಪೂಜೆ

Date:

ಜಮ್ಮು ಮತ್ತು ಕಾಶ್ಮೀರದ ಪಹಲಾಮ್ನಲ್ಲಿ ನಡದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿರುವ ‘ಆಪರೇಷನ್ಸ್ ಸಿಂಧೂರ’ ಕಾರ್ಯಾಚರಣೆ ಬೆಂಬಲಿಸಿ, ಯೋಧರ ಶ್ರೇಯಸ್ಸಿಗೆ ಪ್ರಾರ್ಥಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ತಾಲೂಕಿನ ಎಲ್ಲ ಗ್ರಾಮಗಳ ಗ್ರಾಮದೇವಿ ದೇವಸ್ಥಾನಗಳಲ್ಲಿ ಏಕಕಾಲಕ್ಕೆ ಪೂಜೆ ಸಲ್ಲಿಸಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಬಾಳಂಬಿಡ ಗ್ರಾಮದಲ್ಲಿ ಗ್ರಾಮದೇವಿ ಲಕ್ಷ್ಮಿ  ದೇವಸ್ಥಾನದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಗ್ರಾಮದೇವಿಗೆ ರಾಷ್ಟ್ರಧ್ವಜ ಸಮರ್ಪಿಸುವ ಮೂಲಕ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

“ಉಗ್ರಗಾಮಿಗಳ ಹುಟ್ಟಡಗಿಸಲಿ, ಯೋಧರಿಗೆ ಶ್ರೇಯಸ್ಸು ಸಿಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ವಿಶೇಷ ಪ್ರಾರ್ಥನೆ ಗ್ರಾಮಗಳ ಗ್ರಾಮದೇವಿ ದೇವಸ್ಥಾನಗಳು,  ಏಕಕಾಲಕ್ಕೆ ಪೂಜೆ ಸಲ್ಲಿಸುವ ಮೂಲಕ ಯೋಧರ ಒಳಿತಿಗೆ ಪ್ರಾರ್ಥನೆ ಸಲ್ಲಿಸಲಾಯ್ತು.  ಆತಂಕವಾದ ಅಂತ್ಯಗೊಳಿಸಿ ನವಭಾರತ ಕಟ್ಟಬೇಕಾದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ. ಸೇನೆಯಲ್ಲಿ ಸಹ ವಿವಿಧ ಧರ್ಮಗಳಿಗೆ ಸೇರಿರುವ ಯೋಧರಿದ್ದು ದೇಶಾಭಿಮಾನ ಮೆರೆದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ” ಎಂದು ಗ್ರಾಮಸ್ಥರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ಪುಣ್ಯಭೂಮಿಯಾಗಿದೆ. ಈ ವಿಶ್ವಾಸವನ್ನು ಎಲ್ಲರಲ್ಲಿಯೂ ಸಹ ಮೂಡಿಸಿದರೆ ಭಾರತ ವಿಶ್ವಗುರುವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ನಾವೆಲ್ಲರೂ ಭಾರತದ ಸರ್ಕಾರ ಮತ್ತು ಸೇನೆಯೊಂದಿಗೆ ಗಟ್ಟಿಯಾಗಿ ನಿಂತು ಈ ಹೋರಾಟದಲ್ಲಿ ವಿಜಯ ಸಾಧಿಸೋಣ” ಎಂದು ಗ್ರಾಮಸ್ಥರು ಹೇಳಿದರು.

ಅವರು ಅಪರೇಷನ್ಸ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹೇಮರೆಡ್ಡಿ ಮಲ್ಲಮ್ಮ ಬದುಕು ಮನುಕುಲಕ್ಕೆ ಆದರ್ಶ : ಸಚಿವ ರಹೀಂ ಖಾನ್

ಈ ಸಂದರ್ಭದಲ್ಲಿ ಶೇಕಯ್ಯ ಚಿಕ್ಕಮಠ, ನಾಗಯ್ಯ ಹಿರೇಮಠ, ರಾಜು ಬಾರ್ಕಿ, ಬಸವರಾಜ್ ದೊಡ್ಮನಿ, ಶಿವಪ್ಪ ಬಾರ್ಕಿ, ಪಕೀರಪ್ಪ ಚಿಕ್ಕಜ್ಜನವರ, ರಾಜೇಂದ್ರ ಚಿನ್ನಣ್ಣನವರ್, ಮಾರುತಿ ದೇವಸುರ, ಗುಡ್ಡಪ್ಪ ಕೆಂಚಣ್ಣನವರ, ಶಿವಪುತ್ರಪ್ಪ ಹರಿಜನ, ರುದ್ರಪ್ಪ ಹೇರೂರು, ನಾಗರಾಜ ಬೊಮ್ಮಣ್ಣನವರ, ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...