ಹಾವೇರಿ | ಚಾಲಕನ ನಿರ್ಲಕ್ಷದಿಂದ ವಿದ್ಯಾರ್ಥಿಗೆ ಸರಕಾರಿ ಬಸ್ ಡಿಕ್ಕಿ

Date:

ಪರೀಕ್ಷೆ ಬರೆಯಲು ಹೊರಟಿದ್ದ ರೋಹಿತ್ ಕೇಸರಹಳ್ಳಿ ವಿದ್ಯಾರ್ಥಿಗೆ ಚಾಲಕನ ನಿರ್ಲಕ್ಷ್ಯದಿಂದ ಸರಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯ ಬೆನ್ನು ಕೈಕಾಲುಗಳಿಗೆ ಗಾಯಗೊಂಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಕೊಣತಂಬಿಗಿ ಗ್ರಾಮದ ವಿಧ್ಯಾರ್ಥಿಯಾಗಿದ್ದು, ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ವಸತಿ ನಿಲಯದದಿಂದ ಪರೀಕ್ಷೆ ಬರೆಯಲು ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಇದರಿಂದ ಗಾಯಗೊಂಡು, ಪರೀಕ್ಷೆಯಿಂದ ವಂಚಿತನಾಗಿದ್ದಾನೆ. 

ಚಾಲಕನ ನಿರ್ಲಕ್ಷತನವನ್ನು ಖಂಡಿಸಿ ಬಸ್ ನಿಲ್ದಾಣ ಬಂದ್ ಮಾಡಿ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಜರುಗಿಸಲು ವಿದ್ಯಾರ್ಥಿಗಳು, ಸಹಪಾಠಿಗಳು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ತಿಳಿದ ತಕ್ಷಣಕ್ಕೆ ಎಸ್ಎಫ್ಐ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸುವಂತೆ ಒತ್ತಡ ಹಾಕಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಸಣ್ಣ ಪುಟ್ಟ ಗಾಯಗೊಂಡ ವಿದ್ಯಾರ್ಥಿಗೆ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದ ತಕ್ಷಣ ಹೋರಾಟವನ್ನು ನಿಲ್ಲಿಸಿ ತಮ್ಮ ತಮ್ಮ ಕಾಲೇಜಿಗಳಿಗೆ ತೆರಳಲು ಕರೆ ನೀಡಿದರು.

ದಿನನಿತ್ಯವು ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ಸೇವೆ ಒದಗಿಸುವಲ್ಲಿ ನಿರ್ಲಕ್ಷ್ಯತನ ತೋರಿತ್ತಿರುವುದು ಹಾಗೂ ಶಕ್ತಿ ಯೋಜನೆ ನೆಪದಿಂದಾಗಿ ತಮ್ಮ ಕರ್ತವ್ಯ ಜವಾಬ್ದಾರಿ ಮರೆಮಾಚುತ್ತಿರುವುದನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸಿತು.

ಕೆಎಸ್ಆರ್ಟಿಸಿ ಡ್ರೈವರ್‌ ಹಾಗೂ ಕಂಡಕ್ಟರ್ ಅವರ ನಿರ್ಲಕ್ಷ್ಯತನದಿಂದಾಗಿ ಈ ಘಟನೆ ಸಂಭವಿಸಿದ್ದು ಸಮರ್ಪಕವಾಗಿ ಬಸ್ಸಿನ ಸೌಲಭ್ಯ ಒದಗಿಸದೆ ಇರುವುದೆ ಪ್ರಮುಖ ಕಾರಣ ಎಂದು ಎಸ್ಎಫ್ಐ ಗಂಭೀರವಾಗಿ ಆರೋಪಿಸಿತು.

“ಈ ಹಿಂದ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅರ್ಧ ಗಂಟೆಗೊಮ್ಮೆ ಬಸ್ ಗಳನ್ನು ಬಿಡುತಿದ್ದರು. ಆದರೆ ಕಳೆದ ಎರಡು ಮೂರು ತಿಂಗಳಿಂದ ಅವರ ಆದೇಶವನ್ನು ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆ ಉಲ್ಲಂಘನೆ ಮಾಡಿದೆ. ಇದರಿಂದ ದಿನ ನಿತ್ಯವು ವಿದ್ಯಾರ್ಥಿಗಳ ಸಮಯಕ್ಕೆ ಸರಿಯಾಗಿ ಸಮರ್ಪಕ ಬಸ್ ಬಿಡದೆಯಿರುವುದರಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷರು ಬಸವರಾಜ ಎಸ್ ಅಸಮಾಧಾನ ವ್ಯಕ್ತಪಡಿಸಿದರು.

“ಸರ್ಕಾರ ಹಾಗೂ ಜಿಲ್ಲಾಡಳಿತ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ಸೇವೆಗೆ ಸಮರ್ಪಕವಾಗಿ ಬಸ್ಸುಗಳನ್ನು ಬಿಡಬೇಕು ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಸಿನ ಸೌಲಭ್ಯ ಒದಗಿಸಬೇಕು” ಎಂದರು.

“ನಿತ್ಯವು ಕನಿಷ್ಠ 20 ಬಸ್ಸುಗಳನ್ನು ನಗರ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಶಿಸ್ತು ಕ್ರಮ ಜರುಗಿಸಬೇಕು. ಗಾಯಗಳು ವಿದ್ಯಾರ್ಥಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಜೊತೆಗೆ 1 ಲಕ್ಷ ಪರಿಹಾರ ಕೊಡಬೇಕು. ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಸಭೆ ಕರೆದು ಇಡೀ ಜಿಲ್ಲೆಯ ಬಸ್ಸಿನ ಸಮಸ್ಯೆಗಳನ್ನು ಪರಿಹಾರಿಸಬೇಕು ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಜಿಲ್ಲಾ ಮುಖಂಡರಾದ ಅರುಣ್ ನಾಗವತ್ ಆಗ್ರಹಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...