ಹಾವೇರಿ | ಮಕ್ಕಳ ಬಗ್ಗೆ ಕಾಳಜಿ ವಹಿಸಿ: ನ್ಯಾಯಾಧೀಶೆ ಶ್ರೀಶೈಲಜಾ ಎಚ್.ವಿ

Date:

“ಗ್ರಾಮೀಣ ಭಾಗಗಳಲ್ಲಿರುವ ಎಲ್ಲಾ ಮಾಹಿತಿಗಳು ಆಶಾ ಕಾರ್ಯಕರ್ತರಿಗೆ ತಿಳಿದಿರುತ್ತದೆ. ಪ್ರತಿ ಮನೆ ಮನೆಗಳಿಗೆ ಭೇಟಿ ನೀಡಿ. ಜನರ ಆರೋಗ್ಯದ ಬಗ್ಗೆ ವಿಚಾರಿಸುತ್ತಿರುವ ತಾವುಗಳು, ಬಾಲ್ಯವಿವಾಹ ನಿಷೇಧ ಕಾಯ್ದೆ ತಿಳುವಳಿಕೆ ನೀಡಬೇಕು ಮತ್ತು ಹೆಣ್ಣು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ” ಎಂದು ನ್ಯಾಯಾಧೀಶೆ ಶ್ರೀಶೈಲಜಾ ಎಚ್.ವಿ ಹೇಳಿದರು.

ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಇತ್ತೀಚೆಗೆ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನ ಅಂಗವಾಗಿ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಮತ್ತು ಪೊತ್ತೋ ಕಾಯ್ದೆ-2012ರ ಕುರಿತು ಬ್ಯಾಡಗಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಒಂದು ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಸಾಮಾಜಿಕ ಪಿಡುಗುಗಳಾಗಿರುವ ಬಾಲ್ಯವಿವಾಹ ನಿಷೇಧಕಾಯ್ದೆ ಬಗ್ಗೆ ಹಾಗೂ ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ತಾಲೂಕು ವೈದ್ಯಾಧಿಕಾರಿ ಡಾ.ಕಾಂತೇಶ ಹೆಚ್ ಭಜಂತ್ರಿ ಅವರು ಮಾತನಾಡಿ, “ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ತಿಳಿಸಬೇಕು. ಬಾಲ್ಯವಿವಾಹದಿಂದ ಮಕ್ಕಳ ಆರೋಗ್ಯದ ಬಗ್ಗೆ ತುಂಬಾ ಅಡ್ಡ ಪರಿಣಾಮಗಳು ಉಂಟಾಗುತ್ತದೆ. ಜನಿಸಿದ ಮಗುವು ಅಪೌಷ್ಠಿಕತೆಯಿಂದ ಬಳಲುತ್ತದೆ. ಹಾಗಾಗಿ ಆಶಾ ಕಾರ್ಯಕರ್ತೆಯರು ಬಾಲ್ಯವಿವಾಹ, ಪೊಕ್ಸೊ ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಹಕ್ಕುಗಳ ಕಾಯ್ದೆಗಳ ಕುರಿತು ತಿಳಿದುಕೊಳಬೇಕು. ಸಮುದಾಯದಲ್ಲಿರುವ ತಾಯಂದಿರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಿ. ಮಕ್ಕಳನ್ನು ಸಮಾಜದ ಉತ್ತಮ ಪ್ರಜೆಯನ್ನಾಗಿ ಬೆಳಸಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಮಾತನಾಡಿ, “ಸಾರ್ವಜನಿಕರು ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಇದ್ದರೂ ಕೂಡ ಹಲವಾರು ಕಾರಣಗಳಿಂದ ಬಾಲ್ಯವಿವಾಹ ಮಾಡುತ್ತಿದ್ದು, ಇದರಿಂದ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ನಾವೆಲ್ಲರೂ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಪ್ರಯತ್ನಿಸಬೇಕು. ಗ್ರಾಮ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಬಾಲ್ಯವಿವಾಹದ ಬಗ್ಗೆ ಮಾಹಿತಿ ತಿಳಿಸಿದ ತಕ್ಷಣ ಕೂಡಲೇ 1098ಕ್ಕೆ ಕರೆ ಮಾಡಿ ತಿಳಿಸಬೇಕು ಹಾಗೂ ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ಶ್ರಮೀಸಬೇಕು” ಎಂದು ಹೇಳಿದರು.

“ತಾಯಂದಿರು ಹಾಗೂ ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯದ ಬಗ್ಗೆ ಗಮನಹರಿಸಬೇಕು. ಹಾಗೂ ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡುವಂತೆ ತಿಳಿಸಬೇಕು. ಉತ್ತಮ ಶಿಕ್ಷಣ ನೀಡಿ, ಉತ್ತಮ ನಾಗರಿಕರನ್ನಾಗಿ ಮಾಡುವಂತೆ ತಿಳುವಳಿಕೆ ನೀಡಬೇಕು” ಎಂದು ಆಶಾ ಕಾರ್ಯಕರ್ತೆಯರಿಗೆ ಹೇಳಿದರು.

ಚೈತನ್ಯ ರೂರಲ್ ಡೆವಲೆಪ್‌ಮೆಂಟ್ ಸೊಸೈಟಿ ನಿರ್ದೇಶಕ ಎಸ್. ಹೆಚ್ ಮಜೀದ ಅವರು, ಪೊದ್ದೋ ಕಾಯ್ದೆ-2012. ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಕುರಿತು ಉಪನ್ಯಾಸ ನೀಡಿದರು.

ಇದನ್ನು ಓದಿದ್ದೀರಾ? ಬಾಗಲಕೋಟೆ | ಶಿವಾಜಿ ಜಯಂತಿ: ಮಸೀದಿ ಬಳಿಗೆ ಮೆರವಣಿಗೆ ತಲುಪುವ ಮೊದಲೇ ಕಲ್ಲು ತೂರಾಟ ನಡೆದಿದೆ: ಎಸ್‌ಪಿ ಸ್ಪಷ್ಟನೆ

ಬ್ಯಾಡಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚಂದ್ರಶೇಖರ, ತಾಲೂಕು ವ್ಯವಸ್ಥಾಪಕ ಸದಾನಂದ ಕೆ.ಸಿ. ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಎಫ್. ಹುಳ್ಯಾಳ, ತಾಲೂಕು ಆರೋಗ್ಯಾಧಿಕಾರಿ ಪ್ರಶಾಂತ ಎಮ್ ನವಲೆ ಇತರರು ಉಪಸ್ಥಿತರಿದ್ದರು. ಹಿರಿಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲಾ ಈಬಕ್ಕನವರ ಸ್ವಾಗತಿಸಿದರು. ವಿನಯ ಗುಡಗೂರ ಕಾರ್ಯಕ್ರಮ ನಿರೂಪಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...