ಹಾವೇರಿ | ನನ್ನ ಸೇವೆ ಗುರುತಿಸಿ ಗೌರವಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದ: ಉಡಚಪ್ಪ ಮಾಳಗಿ

Date:

“ನನ್ನ ಜೀವನದ 35-40 ವರ್ಷಗಳ ಕಾಲ ನಿರಂತರ ಸಮಾಜ ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ 79 ನೇ ಸ್ವಾತಂತ್ರ್ಯ  ದಿನಾಚರಣೆಯ ಮಹತ್ವದ ದಿನ ನನಗೆ ಅಭಿನಂದನೆ ಸಲ್ಲಿಸಿ ಗೌರವಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ,ಅಲ್ಪಸಂಖ್ಯಾತ ಕಲ್ಯಾಣ ಸಮಿತಿಯ ರಾಜಾಧ್ಯಕ್ಷರು ಉಡಚಪ್ಪ ಮಾಳಗಿ ಹೇಳಿದರು. 

ಹಾವೇರಿ ಪಟ್ಟಣದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ, ಜಿಲ್ಲಾಡಳಿತಕ್ಕೆ ಧನ್ಯವಾದ ಸಲ್ಲಿಸಿ ಮಾತನಾಡಿದರು.

“ವಿದ್ಯಾರ್ಥಿ ದೆಸೆಯಿಂದಲೂ ಸಾಮಾಜಿಕ ಕಳಕಳಿಯ ಹೋರಾಟ ಮಾಡುತ್ತಾ ಬರುತ್ತಿದ್ದೇನೆ.ಕರಾಟೆ ಅಸೋಸಿಯೇಷನ್ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿ ನೀಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯರಾಗಿ ಆರು ವರ್ಷಗಳ ಕಾಲ ಜನತೆಯ ಸೇವೆ ಸಲ್ಲಿಸಿರುತ್ತೇನೆ. ಹಾವೇರಿ ಶಹರ ಪೋಲಿಸ್ ಠಾಣೆ ನಾಗರಿಕ ಸಮಿತಿಯ ಸದಸ್ಯರಾಗಿ ಕೆಲಸ ಮಾಡಿದ್ದೇನೆ.ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯರಾಗಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಮಿತಿ  ಸದಸ್ಯರಾಗಿ,ಅಹಿಂದ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡುತ್ತಿರುವೆ. ಮಾದಿಗರ ಒಳಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾಗಿ ಧ್ವನಿ ಇಲ್ಲದವರ ಧ್ವನಿಯಾಗಿ ಎಲ್ಲಾ ವರ್ಗದ ಹಾಗೂ ಸಮಾಜದ ಜನರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿಕೊಂಡು ಜನರ ಸೇವೆಯನ್ನು ಮುಂದುವರಿಸಿರುತ್ತೇನೆ” ಎಂದರು.

“ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನನ್ನ ಕೈಲಾದಷ್ಟು ಸಹಾಯ ಸಹಕಾರ ಮಾಡುತ್ತಾ ಬರುತ್ತಿರುವುದನ್ನು ಗಮನಿಸಿ ಹಾವೇರಿ ಜಿಲ್ಲಾಡಳಿತ ಸಮಾಜ ಸೇವೆಯನ್ನು ಗುರುತಿಸಿ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಿ ಸನ್ಮಾನಿಸರುವುದು ಹೆಮ್ಮೆಯ ವಿಷಯವಾಗಿದೆ. ನನ್ನ ಈ ಸಮಾಜ ಸೇವೆ ಗುರುತಿಸಿದ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಮತ್ತು  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ ದಾನಮ್ಮನವರ ಅವರಿಗೆ ,ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ ಅವರಿಗೆ ಕೃತಜ್ಞತೆ ಸಲ್ಲಿಸುವೆ” ಎಂದು ಹೇಳಿದರು.

ಈ ಸಮಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ-ಅಧಿಕಾರಿಗಳಿಗೆ  ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...