ಹಾವೇರಿ | ಪೌರ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು: ಉಡಚಪ್ಪ ಮಾಳಗಿ

Date:

“ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಸರ್ಕಾರ ಪೌರ ನೌಕರರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಬೇಕು” ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಒತ್ತಾಯಿಸಿದರು.

ಇಲ್ಲಿನ ನಗರಸಭೆ ಆವರಣದಲ್ಲಿ ಪೌರ ನೌಕರರ ಅನಿರ್ದಿಷ್ಟ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯಿಂದ ಬೆಂಬಲ ಸೂಚಿಸಿ  ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಮಾತನಾಡಿದರು.

“ರಾಜ್ಯದಲ್ಲಿರುವ ಎಲ್ಲಾ ಮಹಾನಗರ ಪಾಲಿಕೆ, ನಗರ- ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಪೌರ ನೌಕರರು ಹಂತ ಹಂತವಾಗಿ ಹೋರಾಟ ಮಾಡುತ್ತಿದ್ದಾರೆ. ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಿಸುವುದು ಹಾಗೂ ಕೆ.ಜಿ ಆಯ್.ಡಿ ಜಿ.ಪಿ.ಎಫ್, ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡಬೇಕು. ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್ ಕ್ಲಿರ್ನ, ಪೌರ ಕಾರ್ಮಿಕರು , ಸೂಪರ್ವೈಸರ್, ವಾಹನ ಚಾಲಕರು, ಕಂಪ್ಯೂಟರ್ ಆಪರೇಟರ್, ಜೂನಿಯರ್ ಪ್ರೋಗ್ರಾಮರ್, ಇನ್ನಿತರ ಗುತ್ತಿಗೆ ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರ ಪಾವತಿ ವೇತನ ಮಾಡಬೇಕು. ಈ ಎಲ್ಲ ಕಾರ್ಮಿಕರನ್ನು ಕಾಯಂ ಮಾಡುವುದು. ಇತರೆ 19  ಬೇಡಿಕೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದು, ಎಲ್ಲಾ ಬೇಡಿಕೆಗಳು ನ್ಯಾಯಯುತಗಳಾಗಿದ್ದು, ಸರ್ಕಾರ ಶೀಘ್ರವಾಗಿ ಪೌರ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಉಡಚಪ್ಪ ಮಾಳಗಿ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂರ್ಭದಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಚಂದ್ರಪ್ಪ ಬೀದರಿ ಮುಖಂಡರಾದ ರಂಗಪ್ಪ ಹೆರಕಲ್,ನಾಗರಾಜ ಮರಡಿಮನಿ.ಶ್ರೀಮತಿ ಶೋಭಾ ಉದಗಟ್ಟಿ.ಬೀಷ್ಟಣ್ಣ ಕೊರವರ. ನೀಲೇಶ ದೇವಿಹೊಸೂರ, ಶೇಖಣ್ಣ ಮಾಳಗಿ,ರಾಜು ಹೊಸಮನಿ,ನಿಂಗಪ್ಪ ಗಡ್ಡಿ.ಹನುಮಂತಪ್ಪ ಸಿ,ಡಿ.ಗಿರೇಶ ಹರವಿ.ರಮೇಶ ಮುಂಜೋಜಿ,ಮಾಲತೇಶ ತಿಗಳೇಣ್ಣನವರ.ರಾಕೇಶ ದೊಡ್ಡಮನಿ, ಈರಣ್ಣ ಮಾಳಗಿ, ವಿನಯ ಬಸೇಗಣ್ಣಿ.ಮಂಜು ದೇವಗಿರಿ, ಸಿದ್ದಪ್ಪ ಯತ್ನಳ್ಳಿ, ನೀಲೇಶ ಗಡ್ಡಿ,ರಾಜು ಮಾಳಗಿ. ಮಂಜುನಾಥ ದೊಡ್ಡಮನಿ. ರಾಧಾ ಕೃಷ್ಣಪ್ಪ ಮರಿಯಣ್ಣನವರ, ದುರಗೇಶ ಮಾಳಗಿ  ಅನೇಕ ಮುಖಂಡರು ಹಾಗೂ ಪೌರ ನೌಕರರು ಭಾಗಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...