ಹಾವೇರಿ | ಕುವೆಂಪು ಅವರ ಸಾಹಿತ್ಯದಲ್ಲಿ ಸಾಮಾಜಿಕ ನ್ಯಾಯ, ಪ್ರಜ್ಞೆ ಇದೆ: ಡಾ. ಹೊನ್ನಪ್ಪ ಹೊನ್ನಪ್ಪನವರ

Date:

“ಕುವೆಂಪು ಅವರ ಸಾಹಿತ್ಯದಲ್ಲಿ ಸಾಮಾಜಿಕ ನ್ಯಾಯ, ಪ್ರಜ್ಞೆ, ಸಂವಿಧಾನದ ಆಶಯ ಒಳಗೊಂಡಿದೆ” ಎಂದು ಡಾ. ಹೊನ್ನಪ್ಪ ಹೊನ್ನಪ್ಪನವರ ಹೇಳಿದರು.

ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಸಹಯೋಗದಲ್ಲಿ ‘ಕುವೆಂಪು ಅವರ ಸಾಹಿತ್ಯದಲ್ಲಿ ಸಂವಿಧಾನಿಕ ನೆಲೆಗಳು’ ಕುರಿತು ವಿಶೇಷ ಉಪನ್ಯಾಸ ಅವರು ನೀಡಿದರು.

“ಕುವೆಂಪು ಅವರ ಪ್ರತಿ ನಾಟಕಗಳಲ್ಲಿಯೂ ಸಾಮಾಜಿಕ ಪ್ರಜ್ಞೆ, ನ್ಯಾಯ ಒಳಗೊಂದಿರುತ್ತದೆ. ಶೂದ್ರ ತಪಸ್ವಿ ನಾಟಕದಲ್ಲಿ ಶಂಭುಕನಿಗೆ ರಾಮನ ಮೂಲಕ ಸಾಮಾಜಿಕ ನ್ಯಾಯವನ್ನು ಕುವೆಂಪು ಅವರು ದೊರಕಿಸಿ, ಶಂಭುಕನನ್ನು ತಪಸ್ಸಿನೆತ್ತರಕೆ ತೆಗೆದುಕೊಂಡು ಹೋದರು. ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ‘ಯಾರು ಮುಖ್ಯರಲ್ಲ, ಯಾರು ಅಮುಖ್ಯರಲ್ಲ’ ಎಂದು ಹೇಳುವುದರ ಮೂಲಕ ಈ ಸಮಾಜದಲ್ಲಿ ಯಾರು ಮೇಲು-ಕೀಳು ಎಂಬುದಿಲ್ಲ. ಎಲ್ಲರೂ ಸಮಾನರೇಂದು ಹೇಳಿದ್ದಾರೆ. ಕುವೆಂಪು ಅವರ ಸಾಹಿತ್ಯವನ್ನು ವಿದ್ಯಾರ್ಥಿಗಳು ಓದಬೇಕು” ಎಂದರು.

“ಜಾತಿ, ಧರ್ಮ ಮೌಢ್ಯದ ಹೆಸರಿನಲ್ಲಿ ಇಂದಿನ ಯುವಕರು ಬಲಿಯಾಗುತ್ತಿದ್ದಾರೆ. ಹಾಗಾಗಿ ಕುವೆಂಪು ಅವರು ಜಾತಿಗೆ ಸಿಲುಕಬೇಡಿ, ಅದರಿಂದ ಹೊರ ಬನ್ನಿ ಮನುಜ ಮತ ಸೇರ ಬನ್ನಿ ಎಂದಿದ್ದಾರೆ” ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಾನಪದ ವಿವಿ ಕುಲಸಚಿವರು ಡಾ. ಶಿವಶಂಕರ ಕೆ ಅವರು ಮಾತನಾಡಿ, “ಕುವೆಂಪು ಅವರ ಸಾಹಿತ್ಯವನ್ನು ಓದಿದರೆ, ಕಷ್ಟದ ನಡುವೆಯು ನಗುವನ್ನು, ಸಂತೋಷವನ್ನು ತುಂಬವ ಸಾಹಿತ್ಯ ರಚಿಸಿದ್ದಾರೆ” ಎಂದರು.

ಮುಖ್ಯ ಅತಿಥಿಗಳು ಡಾ. ಮಲ್ಲಿಕಾರ್ಜುನ ಮಾನ್ಪಡೆ ಅವರು ಮಾತನಾಡಿ, “ಧರ್ಮ, ಜಾತಿ, ಲಿಂಗದ ಆಧಾರದ ಮೇಲೆ ಸಮಾನತೆಯನ್ನು ಮೇಲ್ವರ್ಗದವರು ಕಿತ್ತುಕೊಂದಿದ್ದರು. ಕೆಳ ವರ್ಗದವರಿಗೆ ಶಿಕ್ಷಣ ಪಡೆದುಕೊಳ್ಳಲು ಆಗುತ್ತಿರಲಿಲ್ಲ. ನಂತರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್, ಜ್ಯೋತಿ ಬಾ ಪುಲೆ ಅವರು ಬಂದ ಮೇಲೆ ಎಲ್ಲರಿಗೂ ಶಿಕ್ಷಣ ಪಡೆಯಲಾಯಿತು” ಎಂದು ಹೇಳಿದರು.

ಪ್ರಸ್ತಾವಿಕವಾಗಿ ಚಕೋರ ಸಾಹಿತ್ಯ ವೇದಿಕೆ ಜಿಲ್ಲಾ ಸಂಚಾಲಕ ಮಾರುತಿ ತಳವಾರ ಮಾತನಾಡಿ, “ಚಕೋರ ಸಾಹಿತ್ಯ ವಿಚಾರ ವೇದಿಕೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಪರಿಚಯ, ವಿಚಾರಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳು ಸದುಪಯೋಗ ಪಡೆಕೊಂಡು ಸಾಹಿತ್ಯದ ಕಡೆ ಅಭಿರುಚಿ ಹೆಚ್ಚಿಸಿಕೊಳ್ಳಬೇಕು” ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕಾಲೇಜಿನ ಪ್ರಾಚಾರ್ಯರು ರವಿಕುಮಾರ್ ನಾಯಕ ಅವರು ಅಧ್ಯಕ್ಷತೆ ವಹಿಸಿದ್ದರು, ಕನ್ನಡ ವಿಭಾಗದ ಮುಖ್ಯಸ್ಥರು ಡಾ. ಆಶಿಕಾ.ಎಚ್.ಸಿ, ಇದ್ದರು. ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕರು ಶೇಖರ ಭಜಂತ್ರಿ ಸ್ವಾಗತಿಸಿದರು. ಗೋವಿಂದಪ್ಪ.ಜಿ ಅವರು ನಿರೂಪಿಸಿದರು. ಪುಟ್ಟಪ್ಪ ಲಮಾಣಿ ವಂದನಾರ್ಪಣೆ ಮಾಡಿದರು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...