ಹಾವೇರಿ | ರೈತರ ದವಸ-ಧಾನ್ಯ ಕದಿಯುತ್ತಿದ್ದ ಕಳ್ಳರ ಬಂಧನ

Date:

ರೈತರು ಬೆಳೆದ ದವಸ-ಧಾನ್ಯ ಕದ್ದು ಪರಾರಿಯಾಗುತ್ತಿದ್ದ ಐವರು ಕಳ್ಳರನ್ನು ಹಾವೇರಿಯ ಸವಣೂರು ಪೊಲೀಸರು ಬಂಧಿಸಿದ್ದಾರೆ. ದುರಗಪ್ಪ ಕೊರವರ, ಗಂಗಾಧರ ಕೊಕನೂರ, ಮಾಂತೇಶ ಗದಗ, ಅಮೀತ ಗೋಸಾವಿ ಹಾಗೂ ಅಭಿಷೇಕ ನರೇಗಲ್ ಬಂಧಿತ ಕಳ್ಳರು.

ಬಂಧಿತರಿಂದ 10.27 ಲಕ್ಷ ಮೌಲ್ಯದ ಜೋಳ, ಗೋವಿನಜೋಳ, ಸಾವಿ, ಗೋದಿ, ಕಡ್ಲಿ ಸೇರಿದಂತೆ ವಿವಿಧ ಧಾನ್ಯಗಳು ಹಾಗೂ ಕಳ್ಳತನಕ್ಕೆ ಬಳಸಿದ ಒಂದು ಬೊಲೆರೋ, ಒಂದು ಬೈಕ್‌ನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯ ರೈತರು ಬೆಳೆದ ಬೆಳೆಗಳನ್ನು ಕದ್ದು ಪರಾರಿ ಆಗುತ್ತಿದ್ದರು. ಮಾ.8 ರಂದು ಕಳ್ಳರು ಸವಣೂರು ತಾಲೂಕಿನ ತೆವರಮೆಳ್ಳಳ್ಳಿ ಗ್ರಾಮದ ರೈತ ಶಂಕ್ರಪ್ಪ ದೊಡ್ಡಮನಿ ಎಂಬುವರಿಗೆ ಸೇರಿದ ದವಸ ಧಾನ್ಯಗಳನ್ನು ಕಳ್ಳತನ ಮಾಡಿದ್ದರು. ಬಳಿಕ ಶಂಕ್ರಪ್ಪ ಈ ಕುರಿತು ಸವಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಎಸ್‌ಪಿ ಅಂಶುಕುಮಾರ ಆರೋಪಿಗಳ ಪತ್ತೆಗಾಗಿ ಸವಣೂರು ಸಿಪಿಐ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಹಾವೇರಿ | ನಾಡು, ನುಡಿಗಾಗಿ ಹೋರಾಡಿದ ಧೀಮಂತ ವ್ಯಕ್ತಿತ್ವದ ಗಟ್ಟಿ ಧ್ವನಿ ಡಾ. ಪಾಟೀಲ್ ಪುಟ್ಟಪ್ಪ: ಸಾಹಿತಿ ಸಂಕಮ್ಮ ಸಂಕಣ್ಣವರ

ಈ ಕಳ್ಳತನ ಪ್ರಕರಣ‌ ಪತ್ತೆಯಿಂದ ಒಟ್ಟು ಶಿಗ್ಗಾಂವಿ, ಬಂಕಾಪುರ, ಹುಲಗೂರು ಹಾಗೂ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಒಟ್ಟು ಒಂಬತ್ತು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಬಂಧಿತ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಮತ್ತು ಅವರ ಪರವಾಗಿ ವಕಾಲತ್ತು ನಡೆಸಬಾರದು ಎಂದು ರೈತ ಸಂಘದ ಮುಖಂಡರು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...