“ಸಾಮಾಜಿಕ ನ್ಯಾಯಕ್ಕಾಗಿ ಈ ಸಮೀಕ್ಷೆ ಅಗತ್ಯ ಮತ್ತು ಇದರಲ್ಲಿ ಸರ್ವ ಸಮುದಾಯಗಳ ಹಿಂದುಳಿದವರ ಹಿತ ಅಡಗಿದೆ. ಸಮೀಕ್ಷೆ ವಿರೋಧಿಸುವ ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ” ಎಂದು ಜಾಗೃತ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ವಿನೋದ ಇಟಗಿ ಕಿಡಿಕಾರಿದರು.
ಹಾವೇರಿ ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮತ್ತು ರಾಜಕೀಯವಾಗಿ ಯಾವ ಜಾತಿಗಳು ಎಷ್ಟು ಹಿಂದುಳಿದಿವೆ? ಎಷ್ಟು ಮುಂದುವರೆದಿವೆ? ಎನ್ನುವುದನ್ನು ಕಾಲಕಾಲಕ್ಕೆ ಅಧ್ಯಯನ ಮಾಡಬೇಕು. ಅಂದರೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆ ಆಧಾರದ ಮೇಲೆ ಸರ್ಕಾರಗಳು ನೀತಿ-ನಿರೂಪಣೆ ರೂಪಿಸಬೇಕು. ಜೊತೆಗೆ ಸಾಮಾಜಿಕ ನ್ಯಾಯವನ್ನು ಜಾರಿ ಮಾಡಲು ಪ್ರಯತ್ನಿಸಬೇಕು” ಎಂದು ಹೇಳಿದರು.
“ಸುಪ್ರೀಂ ಕೋರ್ಟ್ (ಮಂಡಲ್ ಕೇಸಿನಲ್ಲಿ) ಎಲ್ಲಾ ರಾಜ್ಯಗಳು ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ರಚಿಸಬೇಕು ಎಂದು ಹೇಳಿದೆ. 10 ವರ್ಷಕ್ಕೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಬೇಕು ಎಂದು ಹೇಳಿರುವುದು. ಇದರಿಂದಾಗಿ ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಸಮೀಕ್ಷೆಯು ನ್ಯಾಯಯುತವಾಗಿದೆ. ಯಾರೂ ಕೂಡ ಸಮೀಕ್ಷೆಗೆ ವಿರೋಧ ಮಾಡಬಾರದು” ಎಂದು ಆಗ್ರಹಿಸುತ್ತಿದ್ದೇವೆ.
“ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷೆ ನಡೆಸುತ್ತದೆಯಾದರೂ ಅದು ಹಿಂದುಳಿದ ಜಾತಿಗಳನ್ನು ಮಾತ್ರ ಸಮೀಕ್ಷೆಗೆ ಒಳಪಡಿಸುವುದಿಲ್ಲ. ರಾಜ್ಯದ ಎಲ್ಲಾ ಜಾತಿಗಳನ್ನು ಅಧ್ಯಯನ ನಡೆಸುತ್ತದೆ. ಅಲ್ಲಿರುವ ಬಡವರನ್ನು ಗಣನೆಗೆ ತೆಗೆದುಕೊಳ್ಳುತ್ತದೆ. ಅದರಿಂದಾಗಿ ಈ ಸಮೀಕ್ಷೆಯಲ್ಲಿ ಸರ್ವ ಸಮುದಾಯಗಳ ಹಿತ ಅಡಗಿದೆ. ಸಮೀಕ್ಷೆಗೆ ವಿರೋಧ ಮಾಡುವವರು ಹಿಂದುಳಿದವರ ವಿರೋಧಿಗಳೇ ಆಗಿರುತ್ತಾರೆ. ತಮ್ಮ ವಿರುದ್ಧ ನಡೆಯುತ್ತಿರುವ ಈ ಷಡ್ಯಂತ್ರವನ್ನು ಹಿಂದುಳಿದ ಸಮುದಾಯಗಳು ಎಂದಿಕೇಂದ್ರ ಸಚಿವರಾದ ವಿ. ಸೋಮಣ್ಣ, ಪ್ರಹ್ಲಾದ ಜೋಶಿ, ಸಂಸದ ತೇಜಸ್ವಿ ಸೂರ್ಯ ಸಮೀಕ್ಷೆ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ ಕೂಡ ಸಮೀಕ್ಷೆ ಕುರಿತು ಅನುಮಾನ ವ್ಯಕ್ತಪಡಿಸಿದ್ದು ಖಂಡನಿಯ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದು ಅವರವರ ವಿಚಾರ. ಆದರೆ ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಹೇಳಿಕೆ ನೀಡಿ ಜನರನ್ನು ದಿಕ್ಕು ತಪ್ಪಿಸುವುದು ಸರಿಯಲ್ಲ” ಎಂದು ಕಿಡಿಕಾರಿದರು.
“ಜಾಗೃತ ಕರ್ನಾಟಕ ಸಂಘಟನೆ ಆಗಿದ್ದು, ಜನರ ಪರವಾಗಿ ಹೋರಾಟ ಮಾಡುವ ಉದ್ದೇಶಗಳಿವೆ. ಆ ನಿಟ್ಟಿನಲ್ಲಿ ಹಾವೇರಿಯಲ್ಲಿಯೂ ವಿಚಾರ ಸಂಕಿರಣ, ಸಂವಾದ ಏರ್ಪಡಿಸಲಾಗುವು” ಎಂದು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಜಾಗೃತ ಕರ್ನಾಟಕ ಜಿಲ್ಲಾ ಸದಸ್ಯರು ಎಂ. ಆರ್ ಅಗಡಿ, ಮಂಜುನಾಥ ಭೋವಿ ಇದ್ದರು.





