ಹಾವೇರಿ | ಕಾಯಕ ಬಂಧುಗಳಿಗೆ ತರಬೇತಿ ಕಾರ್ಯಾಗಾರ 

Date:

ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಬ್ಯಾಡಗಿ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಬ್ಯಾಡಗಿ ಗ್ರಾಮ ಸ್ವರಾಜ್ ಅಭಿಯಾನ ಕರ್ನಾಟಕ ಹಾಗೂ ವನಸಿರಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಾಣಿಬೆನ್ನೂರ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ ಅಡಿಯಲ್ಲಿ ಕಾಯಕ ಬಂಧುಗಳಿಗೆ ಹಾಗೂ ಮಾಸ್ಟರ್ ತರಬೇತಿದಾರರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವನಸಿರಿ ಗ್ರಾಮೀಣ ಸಂಸ್ಥೆ ಸಂಸ್ಸುದ್ದಿನ ಬಳಿಗಾರ್ ಅವರು ಪ್ರಸ್ತಾವಿಕ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗಖಾತ್ರಿಯಲ್ಲಿ 15 ಸಾವಿರ ಮೇಟ್ಸ್ ಗಳು ಇದ್ದಾರೆ. ಇದರಲ್ಲಿ 8ಸಾವಿರ ಆಕ್ಟಿವ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಗ ಮೇಟ್ ಗಳಿಗೆ ಕೆಲಸ ಮಾಡಲು ಸಂಘರ್ಷ ಮಾಡಬೇಕಾದ ಸ್ಥಿತಿ ಇತ್ತು. ಹಿಂದಿನ ತರಬೇತಿಗಳಿಂದ ಈ ಸ್ಥಿತಿ ಈಗ ಬದಲಾಗಿದೆ. ಇಓ ಅವರು ಕ್ರಿಯಾಶೀಲ ವ್ಯಕ್ತಿಯಾಗಿದ್ದು, ಗ್ರಾಮೀಣ ದುಡಿಯುವ ಜನರಿಗೆ ಸಾಕಷ್ಟು ಕ್ರಿಯಾ ಯೋಜನೆಗಳನ್ನು ರೂಪಿಸಿದ್ದಾರೆ.

“ನರೇಗಾ ಯೋಜನೆಯಲ್ಲಿ ಮಹಿಳೆಯರ ಉದ್ಯೋಗ ಪ್ರಮಾಣ ಹೆಚ್ಚಾಗಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು” ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಲಗಳ ಬದುವುಗಳಲ್ಲಿ ನರೇಗಾ ಮೂಲಕ ಒಡ್ದು ಹಾಕುವುದರಿಂದ ನೀರಿನ ಕೊರತೆಯನ್ನು ನಿಗಿಸುತ್ತದೆ. ಹಾಗಾಗಿ ನಾವೆಲ್ಲರೂ ನರೇಗಾ ಯೋಜನೆಯನ್ನು ಬೆಳೆಸೋಣ. ಒಗ್ಗಟ್ಟಾಗಿ ಕೆಲಸ ಮಾಡೋಣ” ಎಂದರು.

ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಮಾತನಾಡಿ, “ನರೇಗಾ ಕೆಲಸ ಆರಂಭ ಆಗಿದ್ದರಿಂದಲೂ ಕೆಲಸ ಮಾಡುತ್ತಾ ಬಂದಿದ್ದೀರಾ. ಗ್ರಾಮ ಸ್ವರಾಜ್ ಅಭಿಯಾನ ಮೂಲಕ ತರಬೇತಿ ಕೊಡುವ ಮೂಲಕ ಜವಾಬ್ದಾರಿ ಹೆಚ್ಚಾಗಿರುವುದು ಕಾಣುತ್ತಿದ್ದೇವೆ. ಈ ತರಬೇತಿಯಿಂದ ಯಾವುದೇ ಸಮಸ್ಯೆಗಳು ಈಗ ಆಗುತ್ತಿಲ್ಲ. 

“ಕಾರ್ಮಿಕರಿಗೆ ಕ್ರಿಯಾಶೀಲ ಮೇಟ್ (ಕಾಯಕ ಬಂಧುಗಳಿಗೆ ಐಡಿ ಕಾರ್ಡ್ ಕೊಡಿಸುವ ಪ್ರಯತ್ನ ಮಾಡುತ್ತೀವೆ” ಎಂದು ಹೇಳಿದರು.

ವನಸಿರಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮೂಲಕ ಜಲ ಸಂಪನ್ಮೂಲ ಹೆಚ್ಚಿಸುವ ಯೋಜನೆಗಳನ್ನು ನರೇಗಾ ಮೂಲಕ ಕೆಲಸ ಮಾಡುತ್ತಿರುವುದು ಖುಷಿ ಸಂಗತಿ. ಎಲ್ಲ ಹಳ್ಳಿಗಳಲ್ಲಿ ಈ ರೀತಿ ಯೋಜನೆಗಳನ್ನು ಹಾಕಿಕೊಳ್ಳಬೇಕು” ಎಂದರು.

ಗ್ರಾಮ ಸ್ವರಾಜ್ ಅಭಿಯಾನ ರಾಜ್ಯ ಮುಖಂಡರು ಅಶೋಕ ಯಾರಗಟ್ಟಿ ಮಾತನಾಡಿ, “ರ್ನಾಟಕದಲ್ಲಿ 50 ತಾಲ್ಲೂಕು, 20 ಜಿಲ್ಲೆಗಳಲ್ಲಿ ಈ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ರಾಣಿಬೆನ್ನೂರ, ಬ್ಯಾಡಗಿ, ಹಿರೇಕೆರೂರ ತಾಲೂಕುಗಳಲ್ಲಿ ಇರುವ ಮೆಟ್ ಗಳಿಗೆ ತರಬೇತಿ ಕೊಡಲಾಗುತ್ತಿದೆ. ಸಾಕಷ್ಟು ವಿಷಯಗಳನ್ನು ಕಲಿಯೋಕೆ ಅವಕಾಶಗಳಿವೆ. ಅಳತೆ ಸಮಸ್ಯೆಗಳು ಅಳತೆ, ಕಡಿಮೆ ಆಗುತ್ತದೆಯೋ ಇಲ್ಲವೋ ತಿಳಿಯಲು ಈ ತರಬೇತಿ ಅನುಕೂಲ ಆಗಲಿದೆ” ಎಂದರು. ಹೋಗಬೇಕು. 

“ಆಕ್ಟಿವ್ ಹಾಗೂ ನ್ಯಾಯಯುತ ಕಾಯಕ ಬಂದುಗಳನ್ನು ಗುರುತಿಸಿ ಪಿಡಿಓ ಮೂಲಕ ಗುರುತಿನ ಚೀಟಿ ಕೊಡಬೇಕು” ಎಂದು ಹೇಳಿದರು.

ತರಬೇತಿಯಲ್ಲಿ ತಾಲ್ಲೂಕಿನ ವಿವಿಧ ಗ್ರಾಮದ ನರೇಗಾ ಮೇಟ್ ಗಳು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...