ಹಾವೇರಿ | ಶಾಸಕ ರುದ್ರಪ್ಪ ಲಮಾಣಿ ಕಾಣೆಯೆಂದು ರೈಲು ಟಿಕೆಟ್ ಕಾಯ್ದಿರಿಸಿದ ಮತದಾರ

Date:

ಶಾಸಕ ರುದ್ರಪ್ಪ ಲಮಾಣಿ ಕಾಣೆಯಾಗಿದ್ದಾರೆಂದು ಆರೋಪಿಸಿರುವ ಹಾವೇರಿ ಕ್ಷೇತ್ರದ ಕೆಲ ಮತದಾರರು, “ನಿಮಗಾಗಿ ರೈಲಿನ ವಿಂಡೋ ಸೀಟ್ ಟಿಕೆಟ್‌ ಕಾಯ್ದಿರಿಸಲಾಗಿದೆ. ದಯವಿಟ್ಟು ಹಾವೇರಿಗೆ ಬನ್ನಿ” ಎಂದು ಆಹ್ವಾನಿಸಿದ್ದಾರೆ.

“ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಪಾರ ಹಾನಿಯಾಗಿದೆ. ಹಾವೇರಿಯಲ್ಲಿ ಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿ ಬಾಲಕ ಮೃತಪಟ್ಟಿದ್ದಾನೆ. ಇಷ್ಟಾದರೂ ಶಾಸಕ ರುದ್ರಪ್ಪ ಲಮಾಣಿ ಸ್ಥಳಕ್ಕೆ ಭೇಟಿ ನೀಡಿಲ್ಲ. ನೊಂದವರ ಅಳಲು ಆಲಿಸಿಲ್ಲ” ಎಂದು ಮತದಾರರು ದೂರಿದ್ದಾರೆ.

“ವಿಧಾನಸಭೆ ಉಪಸಭಾಪತಿಯೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಹಾವೇರಿಯತ್ತ ಬರುತ್ತಿಲ್ಲ. ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದಾರೆ. ಮತದಾರರ ಗೋಳು ಕೇಳುವವರು ಯಾರು?” ಎಂದು ಮತದಾರರು ಅಳಲು ತೋಡಿಕೊಂಡಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರೈಲು ಟಿಕೆಟ್

ಬೆಂಗಳೂರಿನಿಂದ ಹಾವೇರಿಗೆ ಹೊರಡುವ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಕ್ಟೋಬ‌ರ್ 25ರಂದು ರುದ್ರಪ್ಪ ಲಮಾಣಿಯವರ ಹೆಸರಿನಲ್ಲಿ ಸಿಎನ್ಎಎಫ್ ಡಿ-9 ಬೋಗಿಯಲ್ಲಿ 37ನೇ ಸೀಟ್ ಕಾಯ್ದಿರಿಸಲಾಗಿದೆ. ಲಮಾಣಿಯವರ ಮೊಬೈಲ್ ವಾಟ್ಸ್‌ಆ್ಯಪ್‌ಗೆ ಟಿಕೆಟ್ ಕಳುಹಿಸಲಾಗಿದೆ. ಇದೇ ಟಿಕೆಟ್‌ನ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಾಂಗ್ರೆಸ್ ರಾಜ್ಯದಲ್ಲಿಯೇ ಹೆಚ್ಚು ಬಲಿಷ್ಠ ಭದ್ರಕೋಟೆಯಾಗಿದೆ: ಎ ಎನ್ ನಟರಾಜ್ ಗೌಡ

ಟಿಕೆಟ್‌ನ ಚಿತ್ರ ಅಪ್‌ಲೋಡ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಪ್ರಕಟಿಸಿರುವ ಕೆಲ ಮತದಾರರು, “ಸನ್ಮಾನ್ಯ ಶಾಸಕರಿಗೆ ದುಡ್ಡಿನ ಅಭಾವವೆಂದು ತಿಳಿದು, ಹಾವೇರಿ ವಿಧಾನಸಭಾ ಕ್ಷೇತ್ರದ ಜನತೆಯೇ ಅವರಿಗೆ ರೈಲಿನ ಟಿಕೆಟ್ ಕಾಯ್ದಿರಿಸಿದೆ. ಈ ರೈಲು ಏರಿ ಹಾವೇರಿಗೆ ಬಂದರೆ, ಇಲ್ಲಿ ಜನರ ಸಮಸ್ಯೆಗಳನ್ನು ನೋಡಿ. ಸಾಧ್ಯವಾದರೆ ಪರಿಹರಿಸಿ, ಬೇಕಾದಲ್ಲಿ ಅವರಿಗೆ ಹಾವೇರಿಯಿಂದ ಬೆಂಗಳೂರಿಗೆ ವಾಪಸ್ ಹೋಗಲು ನಾವೇ ರೈಲು ಟಿಕೆಟ್ ಕಾಯ್ದಿರಿಕೊಡುತ್ತೇವೆ. ಇಂತಿ ನಿಮ್ಮ ಬಡಪಾಯಿ ಮತದಾರರು” ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...