ಹಾವೇರಿ | ಮಹಿಳೆಯರಿಗೆ ಕಾನೂನು ಅರಿವು ಇರಬೇಕು: ರವಿ ಓಲೇಕಾರ

Date:

“ಕಾನೂನಿನ ಜ್ಞಾನದಿಂದ ಅನ್ಯಾಯಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಕಾನೂನು ಅರಿವು ಪ್ರತಿಯೊಬ್ಬ ನಾಕರಿಕನ ಜೀವನದಲ್ಲಿ ಅತ್ಯಂತ ಅಗತ್ಯವಾಗಿದೆ. ಭಾರತದಲ್ಲಿ ಮಕ್ಕಳು ಮತ್ತು ಮಹಿಳೆಯರರಿಗೆ ವಿಶೇಷ ಕಾನುನೂಗಳಿವೆ. ಆದ್ದರಿಂದ ಮಹಿಳೆಯರು ಕಾನೂನನ್ನು ತಿಳಿದುಕೊಂಡು ಮಹಿಳೆಯರ ಮೇಲೆ ನಡೆಯುವ ಕಾನೂನುಬಾಹಿರ ಚಟುವಟಿಕೆಗಳಿಗೆ ಮತ್ತು ದೌರ್ಜನ್ಯಗಳಿಗೆ ಧ್ವನಿ ಎತ್ತಿ ನಿಲ್ಲಬೇಕು” ಎಂದು ರವಿ ಓಲೇಕಾರ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಮತ್ತು ಸಮಗ್ರ ಸುಸ್ಥಿರ ಕಾರ್ಯಕ್ರಮ ವತಿಯಿಂದ ಕಾನೂನು ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

“ಮಹಿಳೆಯರು ಸಮಾಜದ ಭಾಗವಾಗಿದ್ದು, ಅವರ ಗೌರವ, ಸುರಕ್ಷತೆ ಮತ್ತು ಸಮಾನತೆ ಕಾಪಾಡಲು ಕಾನೂನು ಅತ್ಯಂತ ಪ್ರಮುಖಪಾತ್ರ ವಹಿಸುತ್ತದೆ. ಕಾನೂನು ಅರಿವು ಮಹಿಳೆಯರಿಗೆ ಆತ್ಮ ವಿಶ್ವಾಸ ನೀಡುವುದುರ ಜೊತೆಗೆ ತಮ್ಮ ಹಕ್ಕುಗಳನ್ನು ರಕ್ಷಸಿಕೊಳ್ಳಲು ಶಕ್ತಿಯನ್ನು ಒದಗಿಸುತ್ತದೆ. ಕಾನೂನು ಮಹಿಳೆಯರಿಗೆ ಶಿಕ್ಷಣ ಉದ್ಯೋಗ ಆಸ್ತಿ ಮದುವೆ ಮತ್ತು ವಿಚ್ಛೇದನ್ನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹಿಳೆಯರ ಹಕ್ಕುಗಳನ್ನು ಕಾನೂನು ಸ್ವಸ್ಥವಾಗಿ ಗುರುತಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೃಹಹಿಂಸೆ ತಡೆ ಕಾಯ್ದೆ 2005, ಲೈಗಿಕ ಕಿರುಕುಳ ತಡೆಕಾಯ್ದೆ 2013, ಬಾಲ್ಯವಿವಾಹ ತಡೆಕಾಯ್ದೆ ಮತ್ತು ಮುಂತಾದ ಕಾನುನೂಗಳು ಮಹಿಳೆಯರ ಮೇಲೆ ನಡೆಯುವ ಹಿಂಸೆ ಮತ್ತು ದೌರ್ಜನ್ಯವನ್ನು ತಡೆಯಲು ಸಹಾಯವಾಗಿದೆ” ಎಂದು ಕಾಯಿದೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು.

“ಅನ್ಯಾಯ ಸಂಭವಿಸಿದಾಗ ಪೊಲೀಸ್ ಠಾಣೆ. ನ್ಯಾಯಾಲಯ ಮಹಿಳಾ ಆಯೋಗ ಕಾನೂನು ಸೇವಾ ಪ್ರಾಧಿಕಾರಿಗಳ ಮೂಲಕ ನ್ಯಾಯ ಪಡೆಯಲ್ಲು ಕಾನೂನು ಮಹಿಳೆಯರಿಗೆ ಅವಕಾಶ ಕಲ್ಪಸುತ್ತದೆ” ಎಂದು ತಿಳಿಸದರು.

ಕಾರ್ಯಕ್ರಮದಲ್ಲಿ ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪಿರಪ್ಪ ಶಿರಶಿ ನಿರೂಪಿಸಿದರು. ಮಂಜುಳಾ ನಾಗೋಜಿ ಸ್ವಾಗತಿಸಿದರು. ಹೊನ್ನಮ್ಮ ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...