ಹಾವೇರಿ | ಯುವತಿ ಹತ್ಯೆ ಪ್ರಕರಣ; ಓರ್ವ ಆರೋಪಿ ಬಂಧನ

Date:

ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಯುವತಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನಯಾಜ್ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಾದ ದುರ್ಗಾಚಾರಿ, ವಿನಯ್ ಎಂಬುವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕಳೆದ ಮಾರ್ಚ್ 6ರಂದು ರಾಣೆಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಸ್ವಾತಿಯ ಮೃತದೇಹ ಪತ್ತೆಯಾಗಿತ್ತು. ಬಳಿಕ ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢವಾಗಿತ್ತು. ನಂತರ ಹಲಗೇರಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದರು. ಇದೀಗ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಾತಿ ಎಂಬ ಯುವತಿ ನಯಾಜ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು, ಆದರೆ ನಯಾಜ್ ಸ್ವಾತಿ ಪ್ರೀತಿಯನ್ನು ನಿರಾಕರಿಸಿದ್ದಾನೆ. ಬಳಿಕ ನಯಾಜ್ ಮತ್ತು ಸ್ನೇಹಿತರು ಸೇರಿ ಸ್ವಾತಿ ಬಳಿ ರಾಜಿಗೆ ಮುಂದಾಗಿದ್ದರು. ರಾಜಿ ಸಂಧಾನ ವಿಕೋಪಕ್ಕೆ ತಿರುಗಿ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ನಯಾಜ್, ದುರ್ಗಾಚಾರಿ, ವಿನಯ್ ಸೇರಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಹತ್ಯೆ ಬಳಿಕ ಆರೋಪಿಗಳು ತುಂಗಭದ್ರ ನದಿಯಲ್ಲಿ ಯುವತಿಯ ಮೃತದೇಹ ಎಸೆದಿದ್ದರು ಎನ್ನಲಾಗಿದೆ.

ಈ ಕುರಿತು ಎಸ್‌ಪಿ ಅಂಶುಕುಮಾರ್ ಮಾತನಾಡಿ, “ಮಾರ್ಚ್ 6ಕ್ಕೆ ಅಪರಿಚಿತ ಮಹಿಳೆಯ ಮೃತದೇಹ ದೊರಕಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಯಾಜ್, ವಿನಾಯಕ, ದುರ್ಗಾಚಾರಿ ಎಂಬ ಆರೋಪಿಗಳನ್ನು ಪತ್ತೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ ಪ್ರಕರಣ: ಕಾನೂನು, ಸಂವಿಧಾನ ಮತ್ತು ಅಧಿಕಾರಶಾಹಿ

“ಸ್ವಾತಿಗೆ ಈ ಮೂವರ ಪರಿಚಯ ಇತ್ತು. ಕೊಲೆಗೂ ಮುನ್ನ ರಾಣೆಬೆನ್ನೂರು ಬಳಿ ಸ್ವಾತಿ ಹತ್ತಿರ ಆರೋಪಿಗಳು ಮಾತಾಡಿದ್ದಾರೆ. ಈ ವೇಳೆ ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯ ಆಗಿತ್ತು. ಬಳಿಕ ಸ್ವಾತಿ ಕೊಲೆಗೈದು ಒಂದು ಗಾಡಿಯಲ್ಲಿ ಶವ ಸಾಗಿಸಿ ತುಂಗಭದ್ರಾ ನದಿಯಲ್ಲಿ ಎಸದಿದ್ದಾರೆ. ಆರೋಪಿ ನಯಾಜ್ ಬಂಧನವಾಗಿದೆ, ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ” ಎಂದು ತಿಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...