ಹಾವೇರಿ | ಗಾಂಜಾ, ಮಟ್ಕಾ, ಇಸ್ಪೀಟ್ ಕ್ಲಬ್ ಹೆಸರಲ್ಲಿ ಯುವಕರು ಬಲಿಪಶು: ಕಡಿವಾಣ ಹಾಕುವಂತೆ ಕರವೇ ಗಜಪಡೆ ಆಗ್ರಹ

Date:

“ದುಷ್ಟ ಚಟಗಳಿಂದ ಬಹಳಷ್ಟು ಕುಟುಂಬಗಳು ಬೀದಿಗೆ ಬರುತ್ತಿವೆ. ಯುವಕರು ನಮ್ಮ ದೇಶದ ಭವಿಷ್ಯ. ಆದರೆ ಸಮಾಜದಲ್ಲಿರುವ ಕೆಲವು ಸಮಾಜಘಾತಕ ಶಕ್ತಿಗಳು ಇಸ್ಪೀಟ್ ಕ್ಲಬ್ ಗಳ ಪರವಾನಿಗಿ ಹೆಸರಿನಲ್ಲಿ ಯುವಕರಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದು, ಯುವಕರನ್ನು ಹಾಳು ಮಾಡುತ್ತಿದ್ದಾರೆ.  ಇಂತಹ ಅಕ್ರಮ ಚಟುವಟಿಕೆಗಳ ಮೇಲೆ ಕಡಿವಾಣ ಹಾಕಬೇಕು” ಎಂದು ಕರ್ನಾಟಕ ರಕ್ಷಣಾ ವೇದಿಕೆ ಗಜಪಡೆ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಒತ್ತಾಯಿಸಿದರು.

ಹಾವೇರಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಪಡೆ ವತಿಯಿಂದ ಜಿಲ್ಲೆಯಲ್ಲಿ ಗಾಂಜಾ, ಮಟ್ಕಾ, ಇಸ್ಪೀಟ್ ಕ್ಲಬ್ ಜೂಜಾಟದಿಂದ ಯುವಕರು ಬಲಿಪಶು ಆಗುತ್ತಿದ್ದು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಹಾವೇರಿ ಜಿಲ್ಲೆಯಲ್ಲಿ ಇಸ್ಪೀಟ್ ಕ್ಲಬ್ ಗಳು ಪರವಾನಿಗಿ ಹೆಸರಿನಲ್ಲಿ ಕ್ಲಬ್ ನಡೆಸುತ್ತಾರೆ. ಇದರ ನೆಪದಲ್ಲಿ ಬಹಳಷ್ಟು ಯುವಕರನ್ನು ಹಾಳು ಮಾಡುತ್ತಿದ್ದಾರೆ. ಮಟ್ಕಾ ದಂಧೆ ಎಗ್ಗಿಲ್ಲದೆ  ನಡೆಯುತ್ತಿದ್ದು  ಬಹಳಷ್ಟು ಕುಟುಂಬಗಳು ಬೀದಿಗೆ ಬರುವಂತಾಗಿದೆ. ಎಲ್ಲಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಸಮಾಜಘಾತುಕ ಶಕ್ತಿಗಳನ್ನು ಕೂಡಲೇ ಕಡಿವಾಣ ಹಾಕಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?

ಮನವಿ ಸಂದರ್ಭದಲ್ಲಿ ಕರವೇ ಗಜಪಡೆ ಜಿಲ್ಲಾ ಉಪಾಧ್ಯಕ್ಷ ಯೂಸುಫ್ ಸೈಕಲಗಾರ, ಜಿಲ್ಲಾ ಮಹಿಳಾ ಅಧ್ಯಕ್ಷೆ  ಗೀತಾಬಾಯಿ ಲಮಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪರಪ್ಪಗೌಡ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಿಯಾಜ್ ಲೋಹಾರ, ರಾಜೇಸಾಬ ಮಾನೇಗಾರ, ಶಂಕರ್ ಬಡಿಗೇರ, ಕಲಂದರ ಎಲೆದಹಳ್ಳಿ, ಈರಪ್ಪ ಅಂಗಡಿ, ರೇಶ್ಮಾ ಬೀರಬ್ಬಿ,  ಸಾಧೀಕ ಮೂಲಮೂರಿ,  ಜ್ಯೋತಿ ಅರಕಸಾಲಿ, ಪವೀತ್ರಾ, ಮಹಾವೀರ ಹಳ್ಳಿಯವರ, ಕರವೇ ಗಜಪಡೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...