ಹಾವೇರಿ | ಯುವ ಸಮುದಾಯ ಪರಿಸರ ಸಂರಕ್ಷಣೆಗೆ ಕಂಕಣಬದ್ದರಾಗಬೇಕು: ಡಾ. ಶೃತಿ 

Date:

“ಸುಸ್ಥಿರ ಅಭಿವೃದ್ಧಿಯು ಜಗತ್ತಿಗೆ ಅತ್ಯಂತ ಅಗತ್ಯವಾಗಿದೆ. ಮಾನವನು ಪರಿಸರದ ಶಿಶುವಾಗಿದ್ದು, ಪರಿಸರದ ಆಶ್ರಯದಲ್ಲೇ ಬೆಳೆಯಬೇಕಿದೆ. ಹಾಗಾಗಿ  ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರ ಕೆಲಸವನ್ನು ಪ್ರತಿಯೋರ್ವರೂ ಅತ್ಯಂತ ಮುತುವರ್ಜಿವಹಿಸಿ ಮಾಡಬೇಕಿದೆ. ಅದರಲ್ಲೂ ಯುವ ಸಮುದಾಯ ಪರಿಸರ ಸಂರಕ್ಷಣೆಗೆ ಕಂಕಣಬದ್ದರಾಗಬೇಕು ಎಂದು ಜಿಲ್ಲಾ ಮಾನಸಿಕ ಆರೋಗ್ಯ ತಜ್ಞೆ ಡಾ. ಶೃತಿ ಕರೆ ನೀಡಿದರು. 

ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಕಬ್ಬೂರು ಗ್ರಾಮದ ಸರಕಾರಿ ಪಿಯು ಕಾಲೇಜ್ ನಲ್ಲಿ ಬುಧವಾರ ಆಯೋಜಿಸಿದ್ದ ಇಕೋ ಕ್ಲಬ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

“ಪರಿಸರ ಸಂರಕ್ಷಣೆಯ ಹೊಣೆಗಾರಿಕೆಯನ್ನು ನಾವು ಮರೆತರೆ ಇಡೀ ಜೀವ ಸಂಕುಲವು ವಿನಾಶದಂಚಿಗೆ ತಲುಪುವ ಆತಂಕ ಇದೆ”  ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾರ್ಥಿ-ಯುವಜನರು ಪರಿಸರ ನಾಶದಿಂದ ಭವಿಷ್ಯದಲ್ಲಿ ಎದುರಾಗಬಹುದಾದ ಸಮಸ್ಯೆಯ ಗಂಭೀರತೆಯನ್ನು ಅರಿತುಕೊಂಡು ಜನ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು” ಎಂದರು‌.

“ವಿದ್ಯಾರ್ಥಿಗಳು ಬೌದ್ಧಿಕವಾಗಿ ಹಾಗೂ ದೈಹಿಕವಾಗಿ ಸುಸ್ಥಿಯಲ್ಲಿದ್ದಾಗ ಆರೋಗ್ಯವು ಚನ್ನಾಗಿರುತ್ತದೆ. ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿದ್ದು ಭವಿಷ್ಯದಲ್ಲಿ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕೆಂದರೆ, ಆಸಕ್ತಿವಹಿಸಿ ಅಧ್ಯಯನ ಮಾಡಿ ಜ್ಞಾನ ಸಂಪಾದಿಸಿದರೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಲು ಹಾಗೂ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ” ಎಂದರು.

ಪ್ತಾಸ್ತಾವಿಕವಾಗಿ ಇಕೋ ಕ್ಲಬ್ ಸಂಚಾಲಕ ಗುರುಪಾದಪ್ಪ ವಾಲ್ಮೀಕಿ ಮಾತನಾಡಿ, “ವಾಯು ಮಾಲಿನ್ಯ, ಜಲ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯಗಳಿಂದಾಗಿ ಪರಿಸರವು ಹಾಳಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿ ದೆಸೆಯಿಂದಲೆ ಪರಿಸರ ಮಾಲಿನ್ಯ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಅನುಸರಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯರು ಹೇಮಂತ ಗಂಟೇರ ಮಾತನಾಡಿ, “ಪರಿಸರ ನಾಶದಿಂದಾಗಿ ಜಾಗತಿಕವಾಗಿ ತಾಪಮಾನ ಹೆಚ್ಚಾಗುತ್ತಿದೆಯಲ್ಲದೇ ಸಕಲ ಜೀವ ರಾಶಿಗೆ ರಕ್ಷಾಕವಚವಾಗಿರುವ ಓಜೋನ್ ಪದರವು ಕೂಡ ಹಾಳಾಗುತ್ತಿದ್ದು ಗಂಭೀರ ಅಪಾಯವು ಕಾದಿದೆ, ಇದನ್ನು ಅರಿತುಕೊಂಡು ನಾವೆಲ್ಲರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕು” ಎಂದರು.

ವೇದಿಕೆಯಲ್ಲಿ ಆಂಗ್ಲಭಾಷಾ ಉಪನ್ಯಾಸಕರಾದ ಅಶೋಕ ಬಿ. ಕಹಾರ, ಕೆ. ಕವಿತಾ, ಮಧುಮತಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು‌. ಕಾರ್ಯಕ್ರಮದ ಆರಂಭದಲ್ಲಿ ಕಾವ್ಯಾ ರಿತ್ತಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ರಮೇಶ ನೆಗಳೂರು ಸ್ವಾಗತಿಸಿದರು. ಸವಿತಾ ಹುಣಸಿಮರದ ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು‌.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...