ಹಾವೇರಿ | ಕಾರ್ಮಿಕ ನಿರೀಕ್ಷಕರು ಲತಾ ಟಿ.ಎಸ್ ಅವರ ಮೇಲೆ ಸೂಕ್ತ ಕ್ರಮ ಜರುಗಿಸಲು ಕಾರ್ಮಿಕರು ಒತ್ತಾಯ

Date:

“ಕಾರ್ಮಿಕರಿಗೆ ನೀಡಲಾಗುವ ಉಚಿತ ಕಿಟ್ ಗಳ ಹಂಚಿಕೆಯಲ್ಲಿ ಅಧಿಕಾರಿಗಳು ಬಹಳಷ್ಟು ತಾರತಮ್ಯ ಮಾಡುತ್ತಿದ್ದು, ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು” ಎಂದು ಜಿಲ್ಲಾಧಿಕಾರಿ ಕಛೇರಿ ಎದುರು ಕಾರ್ಮಿಕರು ಪ್ರತಿಭನೆ ನಡೆಸಿದರು.

ಹಾವೇರಿ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದುರು ಕರುನಾಡ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆ ವತಿಯಿಂದ ಕಾರ್ಮಿಕ ನಿರೀಕ್ಷಕರು ಲತಾ ಟಿ.ಎಸ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸುದರು.

ಪ್ರತಿಭಟನೆಯಲ್ಲಿ ಕರುನಾಡ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆ ಅಧ್ಯಕ್ಷರು ಹುಚ್ಚನಗೌಡ ಸರ್ವೇರ್ ಮಾತನಾಡು, “ಕಾರ್ಮಿಕರಿಗೆ ಕಿಟ್ ಗಳ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯವನ್ನು ಪ್ರಶ್ನಿಸಿಲು ಹಾವೇರಿ ತಾಲೂಕು ಕಾರ್ಮಿಕ ನಿರೀಕ್ಷಕರು ಶ್ರೀಮತಿ ಲತಾ ಟಿ.ಎಸ್ ಅವರು ಬಳಿಗೆ ಹೋದಾಗ ಕಚೇರಿಯಲ್ಲಿ ಇರಲಿಲ್ಲ. ದೂರವಾಣಿಯ ಮುಖಾಂತರ ಮಾತನಾಡುವಾಗ ಅಧಿಕಾರಿಗಳು ನಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಯಾರಿಗೂ ಕಿಟ್ ಕೊಡುವುದಿಲ್ಲ, ಏನು ಮಾಡಿಕೊಳ್ತಿರೋ ಮಾಡ್ಕಳ್ಳಿ, ನನಗೆ ಎಂಎಲ್‌ಎ, ಎಧಿಕಾರಿಗಳ ಬೆಂಬಲ ಇದೆ. ಯಾರಿಗೂ ಕಿಟ್ ಕೊಡುವುದಿಲ್ಲ” ಎಂದು ಸರ್ವಾಧಿಕಾರಿ ಮಾತುಗಳನ್ನಾಡಿದ್ದಾರೆ ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ‌. ಇವರ ಗಂಡನ ಮುಖಾಂತರ ಕಾರ್ಮಿಕ ಇಲಾಖೆಯಲ್ಲಿ ಶಾಪ್ ಆ್ಯಕ್ಟ ಅಡಿಯಲ್ಲಿ ನೀಡುವ ಪರವಾನಿಗೆ ಪತ್ರವನ್ನು ವಿತರಿಸಲು ಕಮಿಷನ್ ಏಜೆಂಟ್ ರೂಪದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಿದೆ. ಕಾರಣ ಇಂತಹ ದುರಹಂಕಾರಿ ಅಧಿಕಾರಿಗಳಿಂದ ಎಲ್ಲ ಕಾರ್ಮಿಕರ ಹಕ್ಕು ಚ್ಯುತಿ ಆಗುತ್ತಿದೆ. ಇಂತಹ ಅಧಿಕಾರಿಗಳಿಂದ ಸರ್ಕಾರಿ ಅಧಿಕಾರಿಗಳು ಹಾಗೂ ಸರ್ಕಾರದ ಮೇಲಿನ ವಿಶ್ವಾಸ ಹೋಗುತ್ತಿದೆ. ಇಂತಹ ದುರಹಂಕಾರದ ಅಧಿಕಾರಿಗಳಿಂದ ಸರ್ಕಾರದ ಮಾನವೂ ಬೀದಿಯಲ್ಲಿ ಹರಾಜ್ ಆಗುತ್ತಿದ್ದು, ಇಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಕಾರ್ಮಿಕರು, ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...