ಹಾವೇರಿ | ಶೈಕ್ಷಣಿಕ ಪ್ರವಾಸಕ್ಕೆ ಹೊರಟ್ಟಿದ್ದ ಬಸ್‌ ಪಲ್ಟಿ; 45 ಮಕ್ಕಳಿಗೆ ಗಾಯ; ನಾಲ್ವರ ಸ್ಥಿತಿ ಗಂಭೀರ

Date:

ಶೈಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳು ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಅಪಘಾತಕ್ಕೀಡಾಗಿದ್ದು, 45 ಮಕ್ಕಳಿಗೆ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಬೇವಿನಹಳ್ಳಿ ಕ್ರಾಸ್‌ ಬಳಿ ಬಸ್‌ ಪಲ್ಟಿಯಾಗಿದೆ. ಘಟನೆಯಲ್ಲಿ 45 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಸಜ್ಜಲಗುಡ್ಡದ ಸರ್ಕಾರಿ ಶಾಲೆಯ 53 ವಿದ್ಯಾರ್ಥಿಗಳು ಮತ್ತು ಆರು ಮಂದಿ ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಸರ್ಕಾರಿ ಬಸ್‌ ಬುಕ್‌ ಮಾಡಿಕೊಂಡು ಹೊರಟಿದ್ದ ಅವರು, ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ರಾಕ್ ಗಾರ್ಡನ್ ವೀಕ್ಷಿಸಲು ತೆರಳುತ್ತಿದ್ದರು. ಈ ವೇಳೆ, ಬೇವಿನಹಳ್ಳಿ ಕ್ರಾಸ್ ಬಳಿ ಎದುರಿನಿಂದ ವೇಗವಾಗಿ ಕಾರೊಂದು ಬಂದಿದೆ. ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಸ್‌ ಚಾಲಕ ಯತ್ನಿಸಿದ್ದು, ಬಸ್ ಪಲ್ಟಿಯಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್‌ ಚಾಲಕ ಮಲಪ್ಪ ಹೊಸೂರು ಅವರಿಗೆ ಬೆನ್ನು ಮೂಳೆ ಮರಿದಿದೆ. ಮೂವರು ವಿದ್ಯಾರ್ಥಿಗಳ ಪರಿಸ್ಥಿತಿ ಕೂಡ ಗಂಭೀರವಾಗಿದೆ. ನಾಲ್ವರನ್ನೂ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...