ಶಿಗ್ಗಾವಿ | ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡ ಸ್ಥಳಾಂತರಕ್ಕೆ ಒತ್ತಾಯ

Date:

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡದಲ್ಲಿ ಗಾಳಿ, ಬೆಳಕಿನ ಕೊರತೆ ಇರುವ ಕಾರಣ ತಕ್ಷಣ ಕಟ್ಟಡ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ (ನ.29) ವಿದ್ಯಾರ್ಥಿ ನಿಲಯದ ಮುಂದೆ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಸಿದರೆ, ಮಲಗುವ ಕೊಠಡಿಗಳು ಚಿಕ್ಕವು, ಕಟ್ಟಡದಲ್ಲಿನ ಶೌಚಾಲಯ ಮತ್ತು ಸ್ಥಾನ ಗೃಹಗಳು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಇಲ್ಲ. ಬಟ್ಟೆ ತೊಳೆಯಲು ಸೂಕ್ತ ಸ್ಥಳವಿಲ್ಲ. ಮುಖ್ಯ ರಸ್ತೆಗೆ ಹೊಂದಿಕೊಂಡಿದೆ. ಅದರಿಂದಾಗಿ ವಿದ್ಯಾರ್ಥಿಗಳ ವಿದ್ಯಾಭಾಸಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಈ ಕಟ್ಟಡ ಸ್ಥಳಾಂತರಿಸಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಕಟ್ಟಡ ಸ್ಥಳಾಂತರಿಸಲು ಮುಂದಾಗಿದ್ದರು, ಆದರೆ, ಕಟ್ಟಡ ಮಾಲೀಕ ಸಿದ್ದಾರ್ಥಗೌಡ ಪಾಟೀಲ್‌, ಕಳೆದ 10ತಿಂಗಳ ₹3.78 ಲಕ್ಷ ಬಾಡಿಗೆ ಹಣ ನೀಡಬೇಕು. ಅಲ್ಲದೆ ಕಟ್ಟಡದ ಗೋಡೆಗಳು ಅಲ್ಲಲ್ಲಿ ಹಾನಿಯಾಗಿದ್ದು, ಅದರ ಹಾನಿ ತುಂಬಬೇಕು. ಬಾಕಿ ಇರುವ ವಿದ್ಯುತ್ ಬಿಲ್ ಕಟ್ಟಬೇಕು. ಇಲ್ಲವಾದಲ್ಲಿ ಇಲ್ಲಿನ ಸಾಮಗ್ರಿಗಳನ್ನು ಹೊರ ಹಾಕಲು ಬಿಡುವುದಿಲ್ಲ ಎಂದು ತಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಟ್ಟಡ ಮಾಲೀಕರು ನವೀಕರಣ ಮಾಡದ ಕಾರಣ ಬಾಡಿಗೆ ಹಣ ವಿತರಣೆಯಲ್ಲಿ ವಿಳಂಬವಾಗಿದೆ. ಆದರೆ, ಬಾಡಿಗೆ ಹಣ ಗುರುವಾರ ಸರ್ಕಾರಿ ರಜೆ ಇರುವ ಕಾರಣ ಶುಕ್ರವಾರ ಸಂಪೂರ್ಣ ಹಣ ನೀಡಲಾಗುತ್ತಿದೆ. ಅಲ್ಲಿವರೆಗೆ ಅವಕಾಶ ನೀಡಬೇಕು. ಹೊಸ ಕಟ್ಟಡವನ್ನು ಗುರುತಿಸಲಾಗಿದೆ. ಹಣ ತುಂಬಿದ ನಂತರ ಇಲ್ಲಿನ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗುತ್ತೇವೆ ಎಂದು ಅಧಿಕಾರಿ ಸರಸ್ವತಿ ಗಜಕೋಶ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...