ಹಾವೇರಿ | ಪ್ರಿನ್ಸಿಪಾಲ್​ ನಿಂದನೆ ಆರೋಪ; ಪಿಯು ವಿದ್ಯಾರ್ಥಿ ಆತ್ಮಹತ್ಯೆ 

Date:

ಪ್ರಿನ್ಸಿಪಾಲ್​ ನಿಂದನೆ ಆರೋಪ ಹಿನ್ನಲೆ ತಾಲೂಕಿನ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ.

ಆದಿತ್ಯ ರಘುವೀರ ಚವ್ಹಾಣ (16) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳವಾರ (ನ.28) ರಾತ್ರಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ, ವಿದ್ಯಾರ್ಥಿಯನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆದಿತ್ಯ ಮೃತಪಟ್ಟಿದ್ದಾನೆ.

ಡೊಳ್ಳೇಶ್ವರ ಗ್ರಾಮದ ಅಜ್ಜಿಯ ಮನೆಯಲ್ಲಿ ವಾಸವಿದ್ದ ಈ ವಿದ್ಯಾರ್ಥಿಯ ಮೂಲ ಹಾವೇರಿ ಎಂದು ತಿಳಿದುಬಂದಿದೆ. ಕಾಲೇಜಿನ ಪ್ರಾಚಾರ್ಯರು ನಿಂದಿಸಿ ಅವಮಾನಿಸಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಎಂದು ವಿದ್ಯಾರ್ಥಿಯ ತಂದೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...