ಹಾವೇರಿ | ಕನ್ನಡ ಹೋರಾಟಗಾರರ ಬಿಡುಗಡೆಗೆ ಕರವೇ ಒತ್ತಾಯ

Date:

ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುತ್ತಿರುವಾಗ ಸರ್ಕಾರವು ಪೊಲೀಸರ ಮೂಲಕ ಹೋರಾಟವನ್ನು ಹತ್ತಿಕ್ಕುತ್ತಿದೆ. ಸರ್ಕಾರದ ಈ ನಡೆಯನ್ನು ಖಂಡಿಸುತ್ತೇವೆ ಎಂದು ಮಂಜುನಾಥ ಓಲೆಕಾರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಹಾವೇರಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ತಗೆದು ಬಿಡುಗಡೆ ಮಾಡಬೇಕೆಂದು ಪ್ರತಿಭಟಿಸಿ, ಹಾವೇರಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.

ಈ ವೇಳೆ ಕರವೇ ಗಜಸೇನೆ ಜಿಲ್ಲಾ ಅಧ್ಯಕ್ಷ ಮಂಜುನಾಥ ಓಲೆಕಾರ ಮಾತನಾಡಿ, ಸರ್ಕಾರ ಕರ್ನಾಟಕದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ಸೇರಿದಂತೆ ಅಂಗಡಿ ಹಾಗೂ ವ್ಯಾಪಾರ ಉದ್ದಿಮೆಯ ಮಹಲು, ಕಾರ್ಖಾನೆಗಳು ಸೇರಿದಂತೆ ಎಲ್ಲದರ ನಾಮ ಫಲಕಗಳು ಶೇ.60ರಷ್ಟು ಕನ್ನಡದಲ್ಲಿ ಹಾಕಿರಬೇಕು ಎಂದು ಆದೇಶಿದ್ದು ಸ್ವಾಗತಾರ್ಹ. ಆದರೆ, ತಮ್ಮ ಆದೇಶಕ್ಕೆ ಅನೇಕ ಪರ ಭಾಷಿಕ ವ್ಯಾಪಾರಸ್ಥರು ಮನ್ನಣೆ ನೀಡದೇ ದುರ್ನಡತೆಯನ್ನು ಮುಂದುವರೆಸಿರುವುದನ್ನು ಖಂಡಿಸಬೇಕೆ ಹೊರತು ಹೋರಾಟ ಮಾಡುತ್ತಿರುವವರನ್ನು ಹತ್ತಿಕ್ಕುವುದಲ್ಲ. ನಿಮ್ಮ ಈ  ನಡೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡಪರ ಹೋರಾಟಗಾರ ಟಿ.ಎ. ನಾರಾಯಣಗೌಡರನ್ನು ಬಂಧಿಸಿ ಅಮಾನವೀಯ ರೀತಿಯಲ್ಲಿ ನಡೆಸಿಕೊಂಡಿರುವುದು ಸರಿಯಲ್ಲ. ಕೂಡಲೇ ಟಿ.ಎ. ನಾರಾಯಣಗೌಡರು ಹಾಗೂ ಅವರ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು. ಅವರ ಮೇಲೆ ದಾಖಲಿಸಿರುವ ಮುಕದ್ದಮೆಯನ್ನು ಹಿಂಪಡೆಯಬೇಕು ಇಲ್ಲವಾದರೆ ರಾಜ್ಯವ್ಯಾಪ್ತಿ ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ಗಜಸೇನೆ ಉಪಕಾರ್ಯದರ್ಶಿ ಯಲ್ಲಪ್ಪ ಮರತಿ ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ಕರವೇ ಗಜಸೇನೆ ಕಾರ್ಯಕೃತರು, ಮುಖಂಡರು ಹೋರಾಟಗಾರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...