ಹಾವೇರಿ | ಪ್ರಜ್ಞಾವಂತಿಕೆ ಬೆಳೆದಂತೆ ಪರಂಪರೆಯ ಮೇಲಿನ ಪ್ರೀತಿಯೂ ಬೆಳೆಯಬೇಕು

Date:

ಪ್ರಜ್ಞಾವಂತಿಕೆ ಬೆಳೆದಂತೆ ಪರಂಪರೆಯ ಮೇಲಿನ ಪ್ರೀತಿಯೂ ಬೆಳೆಯಬೇಕು. ನಮ್ಮ ಸುತ್ತಮುತ್ತಲಿರುವ ಪ್ರಾಚೀನ ಸ್ಮಾರಕಗಳ ರಕ್ಷಣೆ, ಅದರ ಕುರಿತಾದ ತಿಳಿವಳಿಕೆ ಹೆಚ್ಚಾಗಬೇಕು. ನಮ್ಮ ದೇಶ ತಂತ್ರಜ್ಞಾನ, ವಿಜ್ಞಾನ, ಆಧ್ಯಾತ್ಮ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿದೆ. ನಮ್ಮ ಪೂರ್ವಜರು ಕೊಡುಗೆಯಾಗಿ ನೀಡಿದ ಸ್ಮಾರಕಗಳ ಸಂರಕ್ಷಣೆ ನಮ್ಮ ಹೊಣೆಯಗಬೇಕು ಎಂದು ಕೆ.ಎಲ್.ಇ ಸಂಸ್ಥೆಯ ಸುದ್ದೆಪ್ಪ ಹಳ್ಳಿಕೇರಿ ಪದವಿ ಕಾಲೇಜಿನ ಉಪನ್ಯಾಸಕ ಡಾ. ಎಸ್‌.ಆರ್. ಕೋರಿಶೆಟ್ಟರ್ ಅಭಿಪ್ರಯಾಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಲಕೇರಿ ಗ್ರಾಮದ ಕೆರೆ ಸೋಮೇಶ್ವರ ದೇವಾಲಯದ ಬಳಿ ಗುದ್ದೆಪ್ಪ ಹಳ್ಳಿಕೇರಿ ಪದವಿ ಕಾಲೇಜಿ ವಿದ್ಯಾರ್ಥಿಗಳಿಗಾಗಿ ನಡೆದ ಇತಿಹಾಸ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಪರಂಪರೆ ಎಂದರೆ ಕೇವಲ ಸ್ಮಾರಕಗಳೊಂದೇ ಅಲ್ಲ. ಅದರ ವ್ಯಾಪ್ತಿ ತುಂಬಾ ವಿಸ್ತಾರವಾದದ್ದು. ಹಳೆಯ ಶ್ರೇಷ್ಠತೆಗಳೆಲ್ಲವನ್ನೂ ಅಳೆಯಲು ಬಿಡದೆ ಉಳಿಸಿಕೊಂಡು ಹೊಳೆಯುವಂತೆ ಮಾಡೋಣ. ಪರಂಪರೆಯನ್ನ ಪ್ರೀತಿಸೋಣ ಮತ್ತು ಸಂರಕ್ಷಿಸೋಣ, ಸ್ಮಾರಕಗಳು ನಮ್ಮ ನಾಡಿನ ಸಾಂಸ್ಕೃತಿಕ ಪ್ರತಿಬಿಂಬಗಳಾಗಿದ್ದು, ನಮ್ಮ ಪ್ರಾಚೀನ ಕಲೆ, ವಾಸ್ತುಶಿಲ್ಪ ಮತ್ತು ಸಂಸ್ಕೃತಿಯನ್ನು ಅರಿಯಲು ಸಹಾಯಕವಾಗಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮಲ್ಲಿ ಪ್ರಾಧ್ಯಾಪಕ ಡಾ. ಶರಣಪ್ಪ ಜಗ್ಗಲ, ಹೇರೂರು ಗ್ರಾಮ ಪಂಚಾಯತಿಯ ಪಿ.ಡಿ.ಓ ಅಧಿಕಾರಿಗಳಾದ ಶ್ರೀಮತಿ, ಎಸ್‌.ಪಿ, ಮರಾಠಿ, ಅಧ್ಯಕ್ಷರಾದ ಶ್ರೀ. ಗುಂಡನಗೌಡ ಪಾಟೀಲ್, ಕಲಕೇರಿ ಗ್ರಾಮದ ಸದಸ್ಯರಾದ ಶ್ರೀ. ರಾಜು ಕಮ್ಮಾರ, ಶ್ರೀ. ಗೂಳಪ್ಪ ಹುಳ್ಳಾಳ, ಶ್ರೀಮತಿ, ಮಂಜಮ್ಮ ಕಿರವಾಡಿ ಹಾಗೂ ಗ್ರಾಮಸ್ಥರಾದ ಪ್ರಕಾಶ ಬಣಕಾರ, ಶಿವನಾಗಪ್ಪ, ಗ್ರಾಮದ ಮಾಜಿ ಸೈನಿಕರಾದ ಶ್ರೀ. ನವೀನಕುಮಾರ ಮೆಳಳ ಮತ್ತು ಇತಿಹಾಸ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...