ಹಾವೇರಿ | ಜಿಲ್ಲಾ ಆಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರ ವಜಾ; ಮರುನೇಮಕಕ್ಕೆ ಆಗ್ರಹ 

Date:

15 ವರ್ಷಗಳಿಂದ ದುಡಿಯುತ್ತಿದ್ದ ಹಾವೇರಿ ಆಸ್ಪತ್ರೆಯ ಕೊರೊನಾ ನೌಕರರನ್ನು ಸರ್ಕಾರ ಅನುದಾನದ ಕೊರತೆ ಹೆಸರಿನಲ್ಲಿ ಸೇವೆಯಿಂದ ವಜಾ ಮಾಡಲು ಹೊರಟಿರುವುದು ವಿಪರ್ಯಾಸವೇ ಸರಿ. ಸರ್ಕಾರ ಅವರ ಸೇವೆಗೆ ಬೆಲೆ ಕೊಟ್ಟು ಅವರ ಕಷ್ಟಕ್ಕೆ ಸ್ಪಂದಿಸುವ ಕೇಲಸ ಆಗಬೇಕಿದೆ ಎಂದು ದಸಂಸ ಹಾವೇರಿ ಜಿಲ್ಲಾ ಸಂಚಾಲಕ ಉಡಚಪ್ಪ ಮಾಳಗಿ ಆಗ್ರಹಿಸಿದರು.

ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ‌ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದ 26 ಮಂದಿ ನೌಕರರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಹಾವೇರಿ ಜಿಲ್ಲಾಸ್ಪತ್ರೆ ಎದುರು ನೌಕರದಾರರಿಂದ ನಡೆಯುತ್ತಿರುವ ಎರಡನೇ ದಿನದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.

“ಆಸ್ಪತ್ರೆ ನೌಕರರು ಕೊರೊನಾ ಕಾಲದಲ್ಲಿ ದೇಶದ ಜನತೆಗೆ ದೇವರಾಗಿ ಕಂಡಿದ್ದರು. ಆದರೆ ಇಂದು ಅವರಿಗೆ ವೇತನ ನೀಡಲು ಅನುದಾನ ಇಲ್ಲ ಎನ್ನುವ ಕಾರಣ ನೀಡಿ ಸರ್ಕಾರ ಅವರನ್ನು ವಜಾ ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾವೇರಿ ಪ್ರತಿಭಟನೆ

“ಗುತ್ತಿಗೆ ನೌಕರರೆಲ್ಲರು 15 ವರ್ಷಗಳಿಂದ ಅಲ್ಲಿ ದುಡಿಯುತ್ತಿದ್ದರು. ಆ ದುಡಿಮೆ ನಚ್ಚಿಕೊಂಡು ತಮ್ಮ ಬದುಕು ಕಟ್ಟಿಕೊಂಡಿದ್ದರು. ಆದರೆ ಇದೀಗ ಸರ್ಕಾರ ಅವರ ಬದುಕಿಗೆ ಕೊಳ್ಳಿ ಇಡುವ ಕೆಲಸ ಮಾಡಿದೆ.‌ ಎಲ್ಲ ಕಾರ್ಮಿಕರ ಕುರಿತಾಗಿಯೂ ಮಾತನಾಡುತ್ತಾರೆ,. ಆದರೆ, ಗುತ್ತಿಗೆ ಕಾರ್ಮಿಕರ ಕುರಿತು ಯಾವುದೇ ಜನಪ್ರತಿನಿದಿಯೂ ಸೊಲ್ಲೆತ್ತುವುದಿಲ್ಲ. ಈಗಲಾದರೂ ಡಿಸೆಂಬರ್‌ 14ರಂದು ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಗುತ್ತಿಗೆ ಕಾರ್ಮಿಕರ ಕುರಿತು ದನಿ ಎತ್ತಬೇಕು” ಎಂದು ಆಗ್ರಹಿಸಿದರು.

ಹಾವೇರಿ ಪ್ರತಿಭಟನೆ

“ಕಳೆದ ಹದಿನೈದು ವರ್ಷಗಳಿಂದ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ 75 ಮಂದಿ ಡಿ ದರ್ಜೆ ನೌಕರರು ಕೆಲಸ ಮಾಡುತ್ತಿದ್ದರು. ಅದರಲ್ಲಿ 14 ಮಂದಿ ಡಿ ದರ್ಜೆ ನೌಕರರು ಸರ್ಕಾರದಿಂದ ನೇಮಕ ಆದವರು. ಆದರೆ ಇದೀಗ ಅನುದಾನದ ಕೊರತೆಯಿಂದ 35 ಮಂದಿ ಕಾರ್ಮಿಕರನ್ನು ಕೆಲಸದಿಂದ ಕಿತ್ತುಹಾಕಿರುವುದು ಖಂಡನೀಯ. ಈ ಕೆಲಸವನ್ನೇ ನಂಬಿಕೊಂಡು ಬದುಕುತ್ತಿರುವ ಕಾರ್ಮಿಕರು ಬೀದಿಗೆ ಬರುಂತಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಐಡಿಎಸ್‌ಒ ಆಗ್ರಹ

“ಏಕಾಏಕಿ ನೌಕರರನ್ನು ವಜಾ ಮಾಡಿದ್ದರಿಂದ 35 ಕುಟುಂಬಗಳು ಬೀದಿಗೆ ಬರುವ ಸಂದರ್ಭ ಬಂದೊದಗಿದೆ. ಹಾಗಾಗಿ ಗುತ್ತಿಗೆ ಕಾರ್ಮಿಕರನ್ನು ಕೂಡಲೇ ಖಾಯಂ ಮಾಡಿಕೊಂಡು, ಸೂಕ್ತ ವೇತನ ನೀಡುವಂತಾಗಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ವರದಿ: ಮೀಡಿಯಾ ವಾಲೆಂಟಿಯರ್ ಜಗದೀಶ್ ಹರಿಜನ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...