ಬೆಳಗಾವಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ರಾಜ್ಯ ಸರಕಾರ ಕಬ್ಬಿನ ದರ ₹ 3,300 ದರ ನಿಗದಿ ಮಾಡಿದ್ದು, ಈ ದರವನ್ನು ಹಾವೇರಿ ಜಿಲ್ಲೆ ರೈತರಿಗೂ ನೀಡುವಂತೆ ಒತ್ತಾಯಿಸಿ ರವಿವಾರ ಹಾವೇರಿ ಪಟ್ಟಣದ ಹುತ್ಮಾತ್ಮ ಮೈಲಾರ ಮಹದೇವಪ್ಪ ವೃತ್ತದಲ್ಲಿ ಪೆಂಡಾಲ್ ಹಾಕಿ ಕಬ್ಬು ಬೆಳೆಗಾರರು ಬೃಹತ್ ಧರಣಿ ಹಮ್ಮಿಕೊಳ್ಳಲಾಗಿದೆ.
“ಕಬ್ಬು ಬೆಲೆ ನಿಗದಿ ಮಾಡುವಂತೆ ರೈತರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇವೆ. ಈ ವರ್ಷ ಬೆಳಗಾವಿಯಲ್ಲಿ ಹೋರಾಟವೂ ಬೃಹತ್ ಪ್ರಮಾಣದಲ್ಲಿ ಹೋರಾಟ ನಡೆದಿತ್ತು. ಈ ಹೋರಾಟದಿಂದ ಎಚ್ಚೆತ್ತ ಸರ್ಕಾರ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಕಬ್ಬಿಗೆ ಟನ್‌ಗೆ ₹3,300 ಕೊಡಿಸಲು ಮುಂದಾಗಿದೆ. ಆದರೆ, ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಮಾತ್ರ ಈ ದರ ಅನ್ವಯವಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಿದ್ದಾರೆ.
ಹೀಗಾಗಿ, ಹಾವೇರಿ ಜಿಲ್ಲೆಗೂ ₹ 3,300 ಬೆಲೆ ನೀಡುವಂತೆ ಒತ್ತಾಯಿಸಿ ಈ ಧರಣಿ ಆರಂಭಿಸಲಾಗಿದೆ’ ಎಂದು ಪ್ರತಿಭಟನಾಕಾರರು ಹೇಳಿದರು.
3300 ಕೊಡದಿದ್ದರೂ 3200 ದರ ನಿಗದಿಗೆ ರೈತರು ಒತ್ತಾಯಿಸಿದರು. ಒಂದು ವೇಳೆ ದರ ನಿಗದಿ ಮಾಡದಿದ್ದಲ್ಲಿ ಕಬ್ಬಿನ ಕಟಾವು ನಿಲ್ಲಿಸಿ, ಜಿಲ್ಲೆಯ ಮೂರು ಕಾರ್ಖಾನೆಗಳನ್ನು ಬಂದ್ ಮಾಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಸ್ಥಳಕ್ಕೆ ಭೇಟಿ “ನಿಮ್ಮ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸುವೆ. ಧರಣಿ ಮೋಟಕುಗೊಳಿಸಿ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಹಿರಿತನದ ಆಧಾರದ ಮೇಲೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡಿ: ಶಾಸಕ ನಾಡಗೌಡ ಮನವಿ
ರೈತರು ₹3300 ದರ ನಿಗದಿ ಮಾಡುವಂತೆ ಪಟ್ಟು ಹಿಡಿದು ಧರಣಿಯನ್ನು ಮುಂದುವರೆಸಿದ್ದಾರೆ. ಧರಣಿಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕು ಕಬ್ಬು ಬೆಳೆಗಾರರು ಪಾಲ್ಗೊಂಡಿದ್ದರು.





