ಹಾವೇರಿ | ಒಳ ಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿ ಖಂಡಿಸಿ, ಮಾರ್ಚ್ 12ಕ್ಕೆ ಬೆಂಗಳೂರಲ್ಲಿ ಪ್ರತಿಭಟನೆ

Date:

“ಒಳ ಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿ ಮಾಡುವ ಕಾಂಗ್ರೆಸ್ ಸರ್ಕಾರದ ಮಹಾದ್ರೋಹವನ್ನು ಖಂಡಿಸಿ ಮಾರ್ಚ 12 ಗುರುವಾರ ಬೆಳಿಗ್ಗೆ-11 ಘಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ರಾಜ್ಯ ಸಂಘಟನಾ ಸಂಚಾಲಕರು ಹಾಗೂ ರಾಜ್ಯ ಮುಖಂಡರು ಉಡಚಪ್ಪ ಮಾಳಗಿ ಕರೆ ನೀಡಿದ್ದಾರೆ.

ಹಾವೇರಿ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, “ಒಳಮಿಸಲಾತಿಗಾಗಿ ಸುಮಾರು 35 ವರ್ಷಗಳ ಕಾಲ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ. ನಮ್ಮ ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರ ನಡೆಯುತ್ತಿದೆ. ‘ಒಳಮೀಸಲಾತಿಯನ್ನು ಅನ್ವಯವಾಗದಂತೆ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ’ ಎಂದು ಸಚಿವ ಸಂಪುಟದಲ್ಲಿ ಹೇಳಲಾಗುತ್ತಿದೆ” ಎಂದಿರುವರು.

“ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರು  17% ರಷ್ಟು ಪರಿಶಿಷ್ಟ ಜಾತಿಗಳ ಮೀಸಲಾತಿ ಹೆಚ್ಚಿಸಲು ಶಿಫಾರಸ್ಸು ಮಾಡಿರುತ್ತಾರೆ. ಎಲ್ಲರಿಗೂ ಅನುಕೂಲವಾಗುವಂತೆ ಮೀಸಲಾತಿಯನ್ನು ರಾಜ್ಯದಲ್ಲಿ 56ರಷ್ಟು ಮೀಸಲಾತಿ ಹೆಚ್ಚಳ ಮಾಡಿ, ಒಳಮೀಸಲಾತಿ ಅನ್ವಯವಾಗುವಂತೆ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು. ಜೊತೆಗೆ ನಮ್ಮ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ನಮ್ಮ ಅಳಿವು-ಉಳಿವಿನ ಈ ನಿರ್ಣಾಯಕ ಹೋರಾಟದಲ್ಲಿ ಉತ್ತರ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಯ ಧಾರವಾಡ, ಉತ್ತರ ಕನ್ನಡ, ಗದಗ ಮತ್ತು ಹಾವೇರಿ ಜಿಲ್ಲೆಯ ಪಕ್ಷಾತೀತವಾಗಿ ಸಮಾಜದ ಎಲ್ಲಾ ನಾಯಕರು, ಮುಖಂಡರು, ಯುವಕರು, ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಪೌರಕಾರ್ಮಿಕರು ಮತ್ತು ಒಳಮೀಸಲಾತಿಯಲ್ಲಿ ಬರುವ ಎಲ್ಲಾ ಪದಾಧಿಕಾರಿಗಳು ಮತ್ತು ಸಮುದಾಯದವರು  ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಕ್ಕೆ ಆಗಮಿಸಿ ಬೃಹತ್ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...