ಹಾವೇರಿ | ಎಸ್‌ಎಫ್‌ಐ 54ನೇ ಸಂಸ್ಥಾಪನಾ ದಿನಾಚರಣೆ

Date:

ಎಸ್‌ಎಫ್‌ಐ ಸಂಘಟನೆ ಇಡೀ ದೇಶದ ಗಮನ ಸೆಳೆದಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳು ಅಂತ ಬಂದರೆ ಮುಂಚೂಣಿಯಲ್ಲಿ ನಿಂತುಕೊಂಡು ಹೋರಾಟ ಮಾಡುತ್ತಾ ಬಂದಿದೆ ಎಂದು ಎಸ್‌ಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಎಸ್ ಹೇಳಿದರು.

ಹಾವೇರಿ ಪಟ್ಟಣದ ಭಾರತ ವಿದ್ಯಾರ್ಥಿ ಫೆಡರೇಷನ್ ಕಚೇರಿಯಲ್ಲಿ ನಡೆದ ಎಸ್‌ಎಫ್‌ಐ 54ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಅನೇಕ ವಿದ್ಯಾರ್ಥಿ ಚಳವಳಿಗಳು ನಡೆದಿವೆ. ಭಗತ್ ಸಿಂಗ್ ವಾರಸುದಾರಂತೆ ನಾವು ಎಸ್‌ಎಫ್‌ಐ ಮೂಲಕ ಹೋರಾಟದ ಹಾದಿಯಲ್ಲಿದ್ದೇವೆ. ಅನೇಕ ಚಳವಳಿಗಳ ಮೂಲಕ ಇವತ್ತು ಶಿಕ್ಷಣದ ಹಕ್ಕು, ಉದ್ಯೋಗ, ಮೂಲಭೂತ ಹಕ್ಕನ್ನು ಪಡೆಯುವಲ್ಲಿ ಸಂಘಟನೆಯು ಚಳವಳಿ ಮಾಡುತ್ತಿರುವುದು ನಮ್ಮ ಹೆಮ್ಮೆಯ ವಿಚಾರ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಕನ್ನಡ ರಕ್ಷಣೆಗೆ ಹೋರಾಡುವ ಹೋರಾಟಗಾರರ ಬಂಧನ ಖಂಡನೀಯ: ಕರವೇ ಕಾರ್ಯಕರ್ತರು

“ಪ್ರಸ್ತುತ ದಿನಗಳಲ್ಲಿ ಒಳ್ಳೆಯ ಶಿಕ್ಷಣ ಪಡೆಯಬೇಕು, ಒಳ್ಳೆಯ ಉದ್ದೋಗ ಪಡೆಯಬೇಕು, ಉತ್ತಮ ರೀತಿಯಲ್ಲಿ ದೇಶ ಕಟ್ಟಬೇಕೆಂಬ ನಿಟ್ಟಿನಲ್ಲಿ ನಮ್ಮ ಎಸ್‌ಎಫ್‌ಐ ನಡೆದುಕೊಂಡು ಬಂದಿದೆ. ಈ ಸಂಘಟನೆಯ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಸಂಘಟನೆಯ ಕಚೇರಿಗಳಲ್ಲಿ, ವಸತಿ ನಿಲಯಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಆಚರಣೆ ಮಾಡುತ್ತಿದ್ದಾರೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘಟನೆಯ ವಿಧ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...