ಹಾವೇರಿ | ಎಸ್‌ಟಿ ಜನರು ಓಡಾಡುವ ರಸ್ತೆ ಬಂದ್‌ ಮಾಡಿದ ಗ್ರಾಮಸ್ಥರು

Date:

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಲಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ರಸ್ತೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಜನಾಂಗದವರು ಅಡ್ಡಾಡುವುದಕ್ಕೆ ಗ್ರಾಮಸ್ಥರು ನಿರ್ಬಂಧ ವಿಧಿಸಿ ರಸ್ತೆಗೆ ಕಲ್ಲುಮುಳ್ಳು ಹಾಕಿ ಬಂದ್‌ ಮಾಡಿದ್ದನ್ನು ವಿರೋಧಿಸಿ ಸ್ಥಳೀಯರು ಬುಧವಾರ(ಡಿ.20) ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

ಮಲಕನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಮತ್ತು ಕುರುಬ ಸಮಾಜಕ್ಕೆ ಸೇರಿದ ಜನರೇ ಹೆಚ್ಚು ವಾಸವಾಗಿದ್ದಾರೆ. ಹಿಂದಿನ ಶಾಸಕರ ಅನುದಾನದಲ್ಲಿ ನಿರ್ಮಿಸಿದ ಸಿ.ಸಿ ರಸ್ತೆಯಲ್ಲಿ ವಾಲ್ಮೀಕಿ ಜನಾಂಗಕ್ಕೆ ಪ್ರವೇಶವಿಲ್ಲ ಎಂದು ನಿರ್ಬಂಧ ಹಾಕಿದ್ದು ಈ ಪ್ರತಿಭಟನೆಗೆ ಕಾರಣವಾಗಿದೆ.

ರೈತ ಮುಖಂಡ ರವೀಂದ್ರಗೌಡ ಪಾಟೀಲ ಮಾತನಾಡಿ, ವಾಲ್ಮೀಕಿ ಸಮಾಜದ ಜನತೆ ಅಡ್ಡಾಡಲು ಅನುಕೂಲವಾಗಲಿ ಎಂದು ಸರ್ಕಾರ ಕಳೆದ ಬಾರಿ ಶಾಸಕರ ಅನುದಾನದಲ್ಲಿ ಲಕ್ಷಾಂತರ ಹಣ ಖರ್ಚು ಮಾಡಿ ಸಿ.ಸಿ ರಸ್ತೆ ನಿರ್ಮಿಸಿದೆ. ಆದರೆ, ಸಾರ್ವಜನಿಕ ರಸ್ತೆಯಲ್ಲಿ ವಾಲ್ಮೀಕಿ ಜನಾಂಗದವರು ಓಡಾಡಬಾರದೆಂದು ಬಹಿಷ್ಕಾರ ಹಾಕಿ ಮುಳ್ಳು, ಕಲ್ಲುಗಳನ್ನು ಹಾಕಿ ಬಂದ್ ಮಾಡಿದ್ದರಿಂದ ಇಲ್ಲಿನ ನಿವಾಸಿಗಳಿಗೆ ತೊಂದರೆಯಾಗಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಖಂಡಿಸಿ ಇಲ್ಲಿನ ಪರಿಶಿಷ್ಟ ಜನಾಂಗದ ಮಹಿಳೆಯರು, ಮಕ್ಕಳು ನ್ಯಾಯಕ್ಕಾಗಿ ಆಗ್ರಹಿಸಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡರು. ಈ ಬಗ್ಗೆ ಜಿಲ್ಲಾಧಿಕಾರಿ, ತಹಸೀಲ್ದಾರ್‌, ಸಮಾಜ ಕಲ್ಯಾಣಾಧಿಕಾರಿ ಮತ್ತು ಪೊಲೀಸ್ ಇಲಾಖೆ ಗಮನಕ್ಕೆ ತಂದರೂ ಇದುವರೆಗೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ. ನಮಗೆ ನ್ಯಾಯ ಸಿಗುವವರೆಗೂ ಧರಣಿ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...