ಹಾವೇರಿ | ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ: ಸಿಇಒ ರುಚಿ ಬಿಂದಲ್

Date:

“ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು ಒಳ್ಳೆಯ ಸುವರ್ಣ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಲ್ ಅವರು ಹೇಳಿದರು.

ಇಜಾರಿಲಕಮಾಪೂರ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ಸೋಮವಾರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಹಂತದ ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯ ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ವೃತ್ತಿ ಪ್ರಪಂಚದ ಅರಿವು ಮತ್ತು ಆಯ್ಕೆಗಳ ಮಾರ್ಗದರ್ಶನ ನೀಡಲು ಆಯೋಜಿಸಲಾದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

“ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿಪರ ಕೋರ್ಸ್‌ಗಳು ಮತ್ತು ಲಭ್ಯವಿರುವ ಉದ್ಯೋಗವಕಾಶಗಳ ಬಗ್ಗೆ ಅರಿವು ಮೂಡಿಸುವುದು. 12ನೇ ತರಗತಿಯ ನಂತರದ ವಿವಿಧ ಪ್ರವೇಶ ಪರೀಕ್ಷೆಗಳ (CET, NEET, JEE ಇತ್ಯಾದಿ) ಬಗ್ಗೆ ಮಾಹಿತಿ ನೀಡುವುದು. ವಿವಿಧ ಕೋರ್ಸ್‌ಳಿಗೆ ಇಲಾಖೆಯಿಂದ ಲಭ್ಯವಿರುವ ಆರ್ಥಿಕ ನೆರವು. ಜಿಲ್ಲೆಯಲ್ಲಿ ಲಭ್ಯವಿರುವ ಇಲಾಖಾ ವಸತಿ ನಿಲಯಗಳ ವಿವರ, ಯುವಕರಿಗೆ/ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದ ನೀಡಲಾಗುವ ವೃತ್ತಿಪರ ತರಬೇತಿಗಳು, ಉದ್ಯಮಶೀಲತೆ ಅಥವಾ ಉನ್ನತ ವ್ಯಾಸಂಗಕ್ಕೆ ನೀಡಲಾಗುವ ಇತರೆ ಇಲಾಖಾ ಸೌಲಭ್ಯಗಳ ಮಾಹಿತಿ ನೀಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಅವರು ವೃತ್ತಿ ಮೇಳದ ಮಳಿಗೆಗಳ ಉದ್ಘಾಟಿಸಿ ಮಾತನಾಡಿದ ಅವರು, “ಮುಂದಿನ ಭವಿಷ್ಯದಲ್ಲಿ ತಮ್ಮ ವಿದ್ಯಾಭ್ಯಾಸದಲ್ಲಿ ಅಭಿರುಚಿ ಮತ್ತು ಆಸಕ್ತಿಯ ಮೇರೆಗೆ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಉತ್ತಮ ಭವಿಷಯ್ಯಕ್ಕಾಗಿ ಪ್ರಯತ್ನ ಹಾಗೂ ಪರಿಶ್ರಮ ಪಡಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮೇಳದಲ್ಲಿ ಒಟ್ಟು 19 ಮಾರ್ಗದರ್ಶನ ಕೇಂದ್ರಗಳನ್ನು ತೆರೆದು. ಮೇಳಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪದವಿ ಪೂರ್ವ ಶಿಕ್ಷಣದ ನಂತರದ ಕೌಶಲ್ಯಯುತವಾದ ಕೋರ್ಸಗಳ ಬಗ್ಗೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ಯಾವ ತರಬೇತಿಗಳನ್ನು ಆಯ್ಕೆ ಮಾಡಿದಲ್ಲಿ ಯಶಸ್ವಿಯಾಗಿ ನಿರ್ವಹಣೆ ಮಾಡಬಹುದು ಎಂಬುದರ ಬಗ್ಗೆ ಪರಿಣಿತರು ಮಾರ್ಗದರ್ಶನ ನೀಡಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ (ಅಭಿವೃದ್ಧಿ) ಹಾಗೂ ಪ್ರಾಂಶುಪಾಲ ಝಡ್ ಎಂ ಖಾಜಿ, ಕಾರ್ಯಕ್ರಮದ ಹಿರಿಯ ಉಪನ್ಯಾಸಕ ಹಾಗೂ ನೋಡಲ್ ಅಧಿಕಾರಿ ಮೌನೇಶ ಬಡಿಗೇರ ಹಾಗೂ ಸಂಸ್ಥೆಯ ಎಲ್ಲ ಉಪನ್ಯಾಸಕರು ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...