ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಎಐಡಿಎಸ್‌ಒ ಒತ್ತಾಯ

Date:

ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಭೀಕರ ದುಃಸ್ಥಿತಿಯ ಕುರಿತು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದೆ. ಈ ಬಗ್ಗೆ ಗಂಭೀರ ವಿಚಾರಣೆ ಕೈಗೊಂಡು ಕೂಡಲೇ ತಜ್ಞರ ಸಮಿತಿ ರಚಿಸಿ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಕ್ರಮ ವಹಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದೆ. ಅದರಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಎಐಡಿಎಸ್‌ಒ ರಾಜ್ಯ ಸಮಿತಿ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ ಒತ್ತಾಯಿಸಿದರು.

ಯಾದಗಿರಿಯಲ್ಲಿ ಇಂದು ಪತ್ರಿಕಾ ಹೇಳಿಕೆ ನೀಡಿದ ಅವರು, “ಶಾಲೆಯಿಂದ ಹೊರಗೆ ಉಳಿದಿರುವ ಮಕ್ಕಳ ಕುರಿತು ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ವಿಚಾರಣೆ ನಡೆಸುವ ಸಂದರ್ಭದಲ್ಲಿ ಕಳೆದ ಹತ್ತು ವರ್ಷಗಳಿಂದ ರಾಜ್ಯವನ್ನು ಆಳಿರುವ ಎಲ್ಲ ಸರ್ಕಾರಗಳ ಮೇಲೆ, ಸರ್ಕಾರಿ ಶಾಲೆಗಳ ಶೋಚನೀಯ ಪರಿಸ್ಥಿತಿಯ ಕುರಿತು ಗಂಭೀರ ಟೀಕೆ ಮಾಡಿದೆ” ಎಂದರು.

“ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳ ಕೊರತೆ, ಕುಡಿಯುವ ನೀರಿನ ಆಭಾವ, ಶಿಥಿಲಗೊಂಡಿರುವ ಕಟ್ಟಡಗಳು ಇನ್ನಿತರ ಮೂಲಸೌಕರ್ಯಗಳ ಕೊರತೆಯಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳ ಬದಲು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಹಲವು ಬಜೆಟ್ ಮಂಡನೆಯಾದರೂ, ಹಲವು ಯೋಜನೆಗಳಿಗೆ ಹಣ ಬಿಡುಗಡೆಗೊಂಡರೂ ಸರ್ಕಾರಿ ಶಾಲೆಗಳ ಪರಿಸ್ಥಿತಿ ಹದಗೆಡಸಿ, ಸರ್ಕಾರವೇ ಖಾಸಗಿ ಶಾಲೆಗಳ ದಾಖಲಾತಿ ಹೆಚ್ಚಿಸುತ್ತಿಲ್ಲವೇ ಎಂದೂ ಸಹ ಘನ ನ್ಯಾಯಾಲಯ ಸರ್ಕಾರವನ್ನು ಕಟುವಾಗಿ ಪ್ರಶ್ನಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಹುಟ್ಟುವ ಪ್ರತಿಯೊಂದು ಮಗುವಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸಬೇಕೆಂಬ ಕಾರಣದಿಂದ ಆರಂಭವಾಗಿರುವ ಸರ್ಕಾರಿ ಶಾಲೆಗಳ ಸಂಖ್ಯೆ, ವಿದ್ಯಾರ್ಥಿಗಳ ಕೊರತೆಯಿಂದಾಗಿ ಕುಸಿದರೆ ಅದೊಂದು ಘೋರ ಅನ್ಯಾಯವೆಂದು ಎಐಡಿಎಸ್‌ಒ ಭಾವಿಸುತ್ತದೆ” ಎಂದರು.

“ಹೈಕೋರ್ಟ್ ಎತ್ತಿರುವ ಪ್ರಶ್ನೆಗಳು ಹಾಗೂ ವ್ಯಕ್ತಪಡಿಸಿರುವ ಕಳಕಳಿ ಒಂದು ನೆಲೆ ಕಾಣಬೇಕಾದರೆ ಈ ಕೂಡಲೇ ಪ್ರಸಕ್ತ ರಾಜ್ಯ ಸರ್ಕಾರ ತಜ್ಞರ ಸಮಿತಿಯನ್ನು ರೂಪಿಸಿ ಸರ್ಕಾರಿ ಶಾಲೆಗಳು ಹಾಗೂ ಒಟ್ಟಾರೆ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಉಳ್ಳವರಿಗೆ ಮಾತ್ರ ಶಿಕ್ಷಣ ಎಂಬಂತಾಗುತ್ತದೆ. ಇದರ ಜೊತೆಗೆ, ಸರ್ಕಾರಿ ಶಾಲಾ ಶಿಕ್ಷಕರು, ಪೋಷಕರು ಹಾಗೂ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರ ಮುಂದಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮೈಸೂರು ದಸರಾ ಗಜಪಡೆಗೆ ಕುಶಾಲತೋಪು ತಾಲೀಮು; ಅಂಜದ ಅಭಿಮನ್ಯು ಪಡೆ

“ಸ್ವಾತಂತ್ರ್ಯ ಹೋರಾಟಗಾರರು ಹಾಗೂ ನವೋದಯ ಚಿಂತಕರ ಕನಸಾಗಿದ್ದ ಈ ದೇಶದ ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸುವ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಉಳಿಸಲು ರಾಜ್ಯದ ಎಲ್ಲ ಜನ ಒಂದಾಗಬೇಕು” ಎಂದು ರಾಜ್ಯದ ಜನರಲ್ಲಿ ಎಐಡಿಎಸ್‌ಒ ಪರವಾಗಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...