ಬಿಜೆಪಿಗೆ ಬೆಂಬಲ ನೀಡುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ: ಜಿ ಟಿ ದೇವೇಗೌಡ

Date:

  • ಹೆಚ್ ಡಿ ದೇವೇಗೌಡರಿಗೆ ಅಗೌರವ ತರುವ ಕೆಲಸ ಮಾಡಿಲ್ಲ
  • ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಲೋಕಸಭೆಯಲ್ಲಿ ಗೆಲ್ಲಬೇಕು

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ನಡೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿಶ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡರು ಮಾತಾಡಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಬಿಜೆಪಿಗೆ ಬೆಂಬಲ ನೀಡುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ. ದೇವೇಗೌಡರ ಬಗ್ಗೆ‌ ನರೇಂದ್ರ ಮೋದಿ ನಂಬಿಕೆ ಇಟ್ಟಿದ್ದಾರೆ” ಎಂದರು.

“ದೇವೇಗೌಡರಿಗೆ ಅಗೌರವ ತರುವ ಕೆಲಸ ಮಾಡಿಲ್ಲ. ದೇವೇಗೌಡರು ಸಣ್ಣ ಕಾರ್ಯಕರ್ತರನ್ನು ಬಿಟ್ಟು ಕೊಡಲ್ಲ ಅಂತ ಹೇಳಿದ್ದಾರೆ. ಹೀಗಾಗಿ ಯಾರೂ ಭಯ ಬೀಳುವುದು ಬೇಡ. ಮೈಸೂರು ಕ್ಷೇತ್ರದಲ್ಲಿ ಜೆಡಿಎಸ್​, ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ. ನಾನು ಅಥವಾ ಪ್ರತಾಪ್ ಸಿಂಹ ಸಂಸದನಾಗಬೇಕು ಅಂತೇನಿಲ್ಲ. ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಬೇಕು, ಅದೇ ನಮ್ಮ ಗುರಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಅವರು ದೇವೇಗೌಡರ ಜೊತೆ ಮಾತಾಡಿದ್ದಾರೆ ಎಂದ‌ ಮೇಲೆ ಎಲ್ಲ ಗೋಡೆ ಬಿದ್ದು ಹೋಯ್ತು. ದೇವೇಗೌಡರಿಗೆ ಇಡೀ ದೇಶ ಗೌರವ ನೀಡುತ್ತದೆ. ಕಾಂಗ್ರೆಸ್ ಮುಕ್ತ ಮಾಡಬೇಕು ಅಂತ ಮೋದಿ ಹೇಳಿದ್ದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲ್ಲ. ಮೋದಿಯನ್ನು ಸೋಲಿಸಲು ಆಗಲ್ಲ. ದೇವೇಗೌಡರು ಸಂಪೂರ್ಣ ಬೆಂಬಲ ಮೋದಿಗೆ ನೀಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಚಿವ ಡಿ.ಸುಧಾಕರ್ ವಿರುದ್ಧದ ದಲಿತ ದೌರ್ಜನ್ಯ ಪ್ರಕರಣಕ್ಕೆ ಹೈಕೋರ್ಟ್ ತಡೆ

“ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಗ್ಯಾರಂಟಿಗಳಿಂದ. ಸಿದ್ದರಾಮಯ್ಯ ಅವರಿಗೆ ದೇವರಾಜ ಅರಸು ಪರಿಸ್ಥಿತಿ ಬರುವುದು ಬೇಡ. ದೇವರಾಜ ಅರಸು ಕುಟುಂಬಕ್ಕೆ ಒಂದು ಎಂಎಲ್​ಸಿ ಸ್ಥಾನ ಕೊಟ್ಟಿಲ್ಲ. ಬಿ ಕೆ ಹರಿಪ್ರಸಾದ್ ಅದನ್ನೇ ಹೇಳಿದ್ದಾರೆ” ಎಂದರು.

“ರಾಜ್ಯ ಬರಗಾಲ ಎದುರಿಸುತ್ತಿದ್ದರೂ ರೈತರ ಬಗ್ಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಐದು ಗ್ಯಾರಂಟಿಯಲ್ಲಿ ಕಾಂಗ್ರೆಸ್ ಸರ್ಕಾರ ಮುಳುಗಿದೆ. ಸರ್ಕಾರ ವರ್ಗಾವಣೆ ದಂಧೆ ನಡೆಸುತ್ತಿದೆ” ಎಂದು ಕಿಡಿಕಾರಿದರು.

ಕೆಂಪಣ್ಣ ಎಲ್ಲಿ ಇದ್ದೀರಾ?

“ಬಿಜೆಪಿ ವಿರುದ್ಧ ದಿನನಿತ್ಯ ಸುದ್ದಿಗೋಷ್ಠಿ ಮಾಡುತ್ತಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈಗ ಎಲ್ಲಿ ಇದ್ದೀರಾ? ಜೆಡಿಎಸ್ ಬದುಕಿದೆ. ಹೋರಾಟ ಮಾಡುತ್ತೇವೆ. ರೈತರ ಪರ ನಾವು ಹೋರಾಟ ಮಾಡುತ್ತೇವೆ. ಇದೇ 26ರಂದು ಕಲಬುರಗಿಯಿಂದ ಕೋರ್ ಕಮಿಟಿ ಪ್ರವಾಸ ಆರಂಭ ಆಗುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...