ಹೆಚ್ ಡಿ ಕೋಟೆ | ‘ಕಬಿನಿ ಉಳಿಸಿ, ಅರಣ್ಯ ರಕ್ಷಿಸಿ’ ಅನಿರ್ದಿಷ್ಟಾವಧಿ ಧರಣಿಗೆ ಜಿಲ್ಲಾಧಿಕಾರಿ ಸ್ಪಂದನೆ; ಕಾಲಾವಕಾಶ ಕೋರಿಕೆ

Date:

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ರೈತಪರ ಸಂಘಟನೆಗಳು, ದಲಿತ ಸಂಘಟನೆಗಳು, ಆದಿವಾಸಿ, ಕನ್ನಡಪರ ಸಂಘಟನೆಗಳು, ಪರಿಸರವಾದಿಗಳು, ಕೆ ಆರ್ ಎಸ್ ಪಕ್ಷ ಹಾಗೂ ಸಾರ್ವಜನಿಕರು ನಡೆಸುತಿದ್ದ ‘ಕಬಿನಿ ಉಳಿಸಿ, ಅರಣ್ಯ ರಕ್ಷಿಸಿ’ ಅನಿರ್ದಿಷ್ಟಾವಧಿ ಧರಣಿಗೆ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿಯವರು ದೂರವಾಣಿ ಕರೆಯ ಮೂಲಕ ಸ್ಪಂದಿಸಿ, ಬೇಡಿಕೆ ಈಡೇರಿಸಲು ಕಾಲಾವಕಾಶ ಕೋರಿರುವುದಾಗಿ ಈದಿನ.ಕಾಮ್ ಗೆ ರೈತ ಮುಖಂಡರಾದ ಮಂಜು ಕಿರಣ್ ಮಾಹಿತಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯವರು ಪ್ರತಿಭಟನೆ ನಿರತರಲ್ಲಿ ಮಾತನಾಡಿ, ಕಬಿನಿ ಉಳಿಸುವ, ಅರಣ್ಯ ರಕ್ಷಿಸುವ ನಿಟ್ಟಿನಲ್ಲಿ ತಂಡ ನಿಯೋಜನೆ ಮಾಡಿ, ವರದಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿ; ಕಾಲಾವಕಾಶ ನೀಡಬೇಕೆಂದು ಕೇಳಿದ ಹಿನ್ನಲೆಯಲ್ಲಿ, ಪ್ರತಿಭಟನಾ ನಿರತರು ಒಕ್ಕೋರಲಿನಿಂದ ಒಪ್ಪಿ ಸಮಯದೊಳಗೆ ಸ್ಪಂದಿಸುವಂತೆ, ಇಲ್ಲವಾದಲ್ಲಿ ಮುಂದಿನ ತಿಂಗಳ (ಫೆಬ್ರವರಿ)ಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿ, ತಾತ್ಕಾಲಿಕವಾಗಿ ಧರಣಿ ಹಿಂತೆಗೆದುಕೊಂಡಿದ್ದಾರೆ.

ಮೈಸೂರು ಜಿಲ್ಲೆಯ ಕಬಿನಿ ಹಿನ್ನೀರಿನ ಪ್ರದೇಶಗಳಲ್ಲಿ ತಲೆ ಎತ್ತಿರುವ 28 ಅಕ್ರಮ ರೆಸಾರ್ಟ್, ಹೋಟೆಲ್ ಹಾಗು ವಾಣಿಜ್ಯ ಕಟ್ಟಡಗಳನ್ನು ತೆರವುಗೊಳಿಸಬೇಕು. ಅಕ್ರಮ ರೆಸಾರ್ಟ್ ಗಳಿಂದಾಗಿ ವನ್ಯಜೀವಿಗಳಿಗೆ ತೊಂದರೆಯಾಗುತ್ತಿದ್ದು ಮಾನವ-ವನ್ಯಜೀವಿ ಸಂಘರ್ಷ ಏರ್ಪಟ್ಟಿದೆ. ಇದರಿಂದಾಗಿ, ಪ್ರಾಣಿಗಳು ಗ್ರಾಮದ ಕಡೆಗೆ ವಲಸೆ ಬರುತಿದ್ದು ಅಲ್ಲಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ. ಇತ್ತೀಚಿಗೆ ಹುಲಿ ದಾಳಿಗೆ ನಾಲ್ವರು ಮೃತಪಟ್ಟಿದ್ದಾರೆ. ಜಾನುವಾರುಗಳು ಸಹ ಬಲಿಯಾಗಿವೆ. ಇದನ್ನೆಲ್ಲಾ ತಡೆಯುವ ನಿಟ್ಟಿನಲ್ಲಿ ಕ್ರಮವಹಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಸಫಾರಿ ನಿಷೇಧಿಸಿದ್ದರು ಕಬಿನಿ ಹಿನ್ನೀರಿನಲ್ಲಿ ಕೆಲವು ಖಾಸಗಿ ರೆಸಾರ್ಟ್ ಗಳು ಅಕ್ರಮವಾಗಿ ಬೋಟ್ ಸಫಾರಿ ನಡೆಸುತ್ತಿವೆ, ಕೂಡಲೇ ಕ್ರಮ ವಹಿಸಬೇಕು. ಪರಿಸರ ಸೂಕ್ಷ್ಮ ವಲಯಗಳಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅರಣ್ಯ ಇಲಾಖೆ, ಕಂದಾಯ ಇಲಾಖೆ, ನೀರಾವರಿ ಇಲಾಖೆಗಳು ಸಹಕರಿಸ ಕೂಡದು. ಅಂತಹ ಅಧಿಕಾರಿಗಳು ಕಂಡುಬಂದಲ್ಲಿ ಕೂಡಲೇ ಅಮಾನತ್ತುಗೊಳಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ತಹಶೀಲ್ದಾರ್ ಶ್ರೀನಿವಾಸ್, ಪ್ರತಿಭಟನೆ ನಿರತರ ಅಹವಾಲು ಆಲಿಸಿ, ಸಂಬಂಧಪಟ್ಟವರಿಗೆ ಕಳುಹಿಸಿಕೊಡುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು; ಬಹುದಿನದ ಕನಸು ಭಗ್ನ

ಪ್ರತಿಭಟನೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಹೊನ್ನೂರು ಪ್ರಕಾಶ್, ಮಂಜು ಕಿರಣ್, ವಕೀಲರಾದ ವಿ. ರವಿಕುಮಾರ್, ಶಿವಲಿಂಗು, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಡಿ.ಪಿ.ಕೆ. ಪರಮೇಶ್, ಜೆ.ಎ. ಶಿವು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...