ಶೆಟ್ಟರ್‌ ರಾಜೀನಾಮೆ ಹಿಂದೆ ಆ ‘ಡಿಎನ್‌ಎ’ ಕೈವಾಡ ಇರಬಹುದು: ಎಚ್‌ ಡಿ ಕುಮಾರಸ್ವಾಮಿ

Date:

  • ಪರೋಕ್ಷವಾಗಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿರುದ್ಧ ಟೀಕೆ
  • ಶೆಟ್ಟರ್‌ ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮ್ಮ ಪಕ್ಷಕ್ಕಿಲ್ಲ

ನಾನು ಹಿಂದೆ ಬಿಜೆಪಿಯಲ್ಲಿ ನಡೆಯುತ್ತಿರುವ ಡಿಎನ್‌ಎ ಚಟುವಟಿಕೆ ಬಗ್ಗೆ ಮಾತನಾಡಿದ್ದೆ. ಜಗದೀಶ್‌ ಶೆಟ್ಟರ್‌ ಅವರಂತವರೇ ರಾಜೀನಾಮೆ ತೀರ್ಮಾನ ಮಾಡಿದ್ದಾರೆಂದರೆ ಆ ‘ಡಿಎನ್ಎ’ ಅಲ್ಲಿಯ ಚಟುವಟಿಕೆಗೆ ಪೂರಕವಾಗಿ ಹೇಗೆ ಕೆಲಸ ಮಾಡಿರಬಹುದೆಂದು ಊಹಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ದೇಶಿಸಿ ವಾಗ್ದಾಳಿ ನಡೆಸಿದರು.

ಧರ್ಮಸ್ಥಳಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, “ಜಗದೀಶ್ ಶೆಟ್ಟರ್ ರಾಜೀನಾಮೆ ವಿಚಾರ ಅವರ ಪಕ್ಷದ ಆಂತರಿಕ ಬೆಳವಣಿಗೆ. ಅವರು ಅನುಭವಸ್ಥ ರಾಜಕಾರಣಿ” ಎಂದರು.

ಶೆಟ್ಟರ್ ಅವರು ನಿಮ್ಮನ್ನು ಸಂಪರ್ಕ ಮಾಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಇಲ್ಲ ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮ್ಮ ಪಕ್ಷಕ್ಕೆ ಇಲ್ಲ. ಸಣ್ಣವರು ಯಾರಾದರೂ ಬಂದರೆ ಸೇರಿಸಿಕೊಳ್ಳುತ್ತೇವೆ. ಯಾಕೆಂದರೆ ನಮ್ಮದು ಸಣ್ಣ ಪಕ್ಷ. ಅಂತ ದೊಡ್ಡ ನಾಯಕರನ್ನು ನಾವು ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ. ಅಂತಹ ದೊಡ್ಡ ನಾಯಕರ ಬಗ್ಗೆ ಯಾವುದೇ ನಿರೀಕ್ಷೆಯಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೋದಿಯವರೇ, ನಿಮ್ಮ ಯಾವುದೇ ಕುತಂತ್ರಕ್ಕೂ ನಾನು ಅಂಜಲಾರೆ: ರಾಹುಲ್ ಗಾಂಧಿ

ಮಂಜುನಾಥ ಸ್ವಾಮಿಯ ದರ್ಶನ ಪಡೆದ ಎಚ್‌ ಡಿ ಕುಮಾರಸ್ವಾಮಿ, ಬಳಿಕ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬೆಂಗಳೂರು ಬೊಮ್ಮನಹಳ್ಳಿ ಕ್ಷೇತ್ರದ ನಾರಾಯಣ ರಾಜು,‌ ವಿಧಾನ‌ ಪರಿಷತ್ ಶಾಸಕ ಎಸ್ ಎಲ್ ಭೋಜೇಗೌಡ, ಜೆಡಿಎಸ್‌ ರಾಜ್ಯ ವಕ್ತಾರ ಹಾಗೂ ಮಾದ್ಯಮ ಸಂಚಾಲಕ ಎಂ ಬಿ ಸದಾಶಿವ,‌ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಜೈನ್, ತಾಲೂಕು ನಿಯೋಜಿತ ಅಧ್ಯಕ್ಷ ಶ್ರೀನಿವಾಸ ಗೌಡ ಪಟ್ರಮೆ, ಪ್ರಮುಖರಾದ ಎಚ್ ಎನ್ ನಾಗರಾಜ್, ರಾಮ ಆಚಾರಿ, ಶಾಹಿದ್ ಪಾದೆ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...