ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರ್ಪಡೆ: ಜೆ ಪಿ ನಡ್ಡಾ ಘೋಷಣೆ

Date:

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್‌ ಡಿ ಕುಮಾರಸ್ವಾಮಿ ಅವರು ಶುಕ್ರವಾರ(ಸೆಪ್ಟೆಂಬರ್‌ 22) ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಔಪಚಾರಿಕವಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸೇರ್ಪಡೆಗೊಂಡರು.

ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್, ನಿಖಿಲ್ ಕುಮಾರಸ್ವಾಮಿ, ಕುಪೇಂದ್ರ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

ಸೇರ್ಪಡೆ ಕುರಿತು ಘೋಷಣೆ ಮಾಡಿದ ಜೆ ಪಿ ನಡ್ಡಾ ಅವರು, “ಜೆಡಿಎಸ್ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ನಾವು ಅವರನ್ನು ಹೃದಯಪೂರ್ವಕವಾಗಿ ಎನ್‌ಡಿಎಗೆ ಸ್ವಾಗತಿಸುತ್ತೇವೆ. ಇದು ಗೌರವಾನ್ವಿತ ಪ್ರಧಾನಮಂತ್ರಿಗಾಗಿ ಹೊಸ ಭಾರತ, ಬಲಿಷ್ಠ ಭಾರತ ನಿರ್ಮಿಸಲು ಎನ್‌ಡಿಎಯನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷದ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಲೋಕಸಭೆ ಚುನಾವಣೆಗೆ ಜೆಡಿಎಸ್‌ನೊಂದಿಗೆ ತಮ್ಮ ಪಕ್ಷವು ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಹೇಳಿದಾಗಿನಿಂದ ಉಭಯ ಪಕ್ಷಗಳ ನಡುವಿನ ಮೈತ್ರಿ ಕುರಿತು ಚರ್ಚೆಗಳು ಬೆಳಕಿಗೆ ಬಂದಿವೆ. ಒಟ್ಟು 28 ಲೋಕಸಭಾ ಕ್ಷೇತ್ರಗಳಿರುವ ಕರ್ನಾಟಕದಲ್ಲಿ ಜೆಡಿಎಸ್‌ 4 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ.

ಈ ಸುದ್ದಿ ಓದಿದ್ದೀರಾ? ಯುಪಿಯ ಸರ್ಕಾರ ಒಬಿಸಿ ಕೋಟಾ ಸೇರಿಸದಿರುವುದಕ್ಕೆ ವಿಷಾದವಿದೆ: ರಾಹುಲ್‌ ಗಾಂಧಿ

ಆದರೆ, ಈ ಕುರಿತ ಚರ್ಚೆಗಳು ಇನ್ನೂ ಅಂತಿಮ ಹಂತಕ್ಕೆ ಬಂದಿಲ್ಲ ಎಂದಿರುವ ಮಾಜಿ ಸಿಎಂ ಯಡಿಯೂರಪ್ಪ, ಇತರ ಜವಾಬ್ದಾರಿಗಳಲ್ಲಿ ನಿರತರಾಗಿರುವ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕೆಲವೇ ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿದ್ದರು.

ಕರ್ನಾಟಕದಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನ, ಕಾಂಗ್ರೆಸ್, ಜೆಡಿಎಸ್‌ ತಲಾ ಒಂದೊಂದು ಸ್ಥಾನ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲದಿಂದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದರು.

ಈ ವರ್ಷ ಮೇನಲ್ಲಿ ನಡೆದ 224 ಸದಸ್ಯ ಬಲದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಪಡೆದುಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...