ಸಿನಿಮೀಯ ರೀತಿಯಲ್ಲಿ ಇಬ್ಬರು ಬಾಲಕರು ಅಪ್ರಾಪ್ತ ಬಾಲಕಿಯನ್ನು ಬಸ್ಸಿನಿಂದ ಕೆಳಗಿಳಿಸಿ ಚಾಕುವಿನಿಂದ ಕತ್ತು ಕೊಯ್ದು ಪರಾರಿಯಾಗಿರುವ ಘಟನೆ ಕಲಬುರಗಿ ಹೊರವಲಯದ ಅಟ್ಟೂರ್ ಕ್ರಾಸ್ ಹತ್ತಿರ ನಡೆದಿದೆ.
ಬೆಳಮಗಿ ಗ್ರಾಮದಿಂದ ವಿ.ಕೆ. ಸಲಗರ್ ಗ್ರಾಮಗಳ ಮಧ್ಯೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಚನ್ನವೀರ ಮತ್ತು ಆತನ ಸ್ನೇಹಿತ ಇಬ್ಬರು ಸೇರಿ ಕೃತ್ಯ ಎಸಗಿ ಅಲ್ಲಿಂದ ಪರಾರಿಯಾಗಿದ್ದಾರೆ.
ಎಸ್‌ಎಸ್‌ಎಲ್‌ಸಿ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದು, ಪ್ರೀತಿ ಮಾಡಲು ನಿರಾಕರಿಸಿದ್ದೇ ಕಾರಣ ಎನ್ನಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರ ತುಷ್ಟೀಕರಣ, ಬಿಜೆಪಿ ಮತ್ತು ಗೋದಿ ಮೀಡಿಯಾ
ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಸ್ಥಿತಿಯಲ್ಲಿರುವ ಬಾಲಕಿಯನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.




