ಕಲಬುರಗಿ | ಶಾಲೆಯಿಂದ ಹಾಲಿನ ಪೌಡರ್‌ ಕದ್ದೊಯ್ದ ಮುಖ್ಯ ಶಿಕ್ಷಕ ಅಮಾನತು

Date:

ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಅನುಷ್ಠಾನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಮತ್ತು ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಶಾಲೆಯಿಂದ ಕದ್ದೊಯ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಖಾಜಪ್ಪ ದೊಡ್ಡಮನಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಮುಖ್ಯ ಶಿಕ್ಷಕ ಖಾಜಪ್ಪ ದೊಡ್ಡಮನಿ ಶಾಲೆಯಿಂದ ಮಕ್ಕಳಿಗೆ ವಿತರಿಸುವ ಹಾಲಿನ ಪೌಡ‌ರ್ ಪ್ಯಾಕೆಟ್‌ಗಳನ್ನು ಕದ್ದು ಮನೆಗೆ ಸಾಗಿಸುವಾಗ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದರು. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಪಾಟೀಲ ಅವರು ಪರಿಶೀಲನೆಗಾಗಿ ಅಕ್ಷರ ದಾಸೋಹ ತಾಲೂಕಾಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡಲು ಸೂಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ‘ಬಸವೇಶ್ವರ ದರ್ಶನ’ ಮಹಾನಾಟಕ ನಿರ್ಮಾಣಕ್ಕೆ ನಿರ್ಣಯ

ಶಾಲೆಯಿಂದ ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಹೊರಸಾಗಿಸುವಲ್ಲಿ ಮುಖ್ಯ ಶಿಕ್ಷಕರ ಪಾತ್ರ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. ವರದಿಯನ್ನು ಆಧರಿಸಿ ಡಿಡಿಪಿಐ ಅಮಾನತುಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...