ವಿಜಯನಗರ | ಹೃದಯಘಾತ; ಪೊಲೀಸ್ ಪೇದೆ ಸಾವು

Date:

ಹೃದಯಾಘಾತದಿಂದ ಪೊಲೀಸ್ ಪೇದೆಯೊಬ್ಬರು ಸಾವನಪ್ಪಿದ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ರಾಘವೇಂದ್ರ (45) ಎಂಬವರು ಮೃತಪಟ್ಟ ಪೊಲೀಸ್‌ ಪೇದೆ, 2005ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ನೇಮಕವಾದ ರಾಘವೇಂದ್ರ ಕಳೆದ 18 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇತ್ತೀಚಿಗಷ್ಟೇ ಬಳ್ಳಾರಿ ಲೋಕಾಯುಕ್ತ ಕಚೇರಿಯಿಂದ ಕಲಬುರಗಿ ಜಿಲ್ಲೆಯ ಕಮಲಾಪುರ ಠಾಣೆಗೆ ವರ್ಗಾವಣೆಗೊಂಡು ಹೆಡ್ ಕಾನ್ಸ್ಟೆಬಲ್ ಆಗಿ ಬಡ್ತಿ ಪಡೆದು ಸೇವೆ ಸಲ್ಲಿಸುತ್ತಿದ್ದರು.

ವಿಜಯನಗರ ಪೊಲೀಸ್ ವರಿಷ್ಠಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಡಿವೈಎಸ್ಪಿ ಮಂಜುನಾಥ್ ತಳವಾರ್, ಹಂಪಿ ಸಿಪಿಐ ಕೆ. ಶಿವರಾಜ್ ಅವರು ರಾಘವೇಂದ್ರ ಅವರ ಅಕಾಲಿಕ ಸಾವಿಗೆ ಸಂತಾಪ ಸೂಚಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...