ಚಿಕ್ಕಮಗಳೂರು | ಓಮ್ನಿ ಕಾರಿನ ಮೇಲೆ ಬಿದ್ದ ಬೃಹತ್‌ ಮರ; ಪ್ರಾಣಾಪಾಯದಿಂದ ಪಾರು

Date:

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಂಗಳವಾರ ಸುರಿದ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೃಹತ್‌ ಗಾತ್ರದ ಮರವೊಂದು ಓಮ್ನಿ ಕಾರಿನ ಮೇಲೆ ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಶೃಂಗೇರಿ ತಾಲೂಕಿನ ಕುಂಚೇಬೈಲು ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದು ಓಮ್ನಿ ಕಾರು ಸಂಪೂರ್ಣ ಜಖಂ ಆಗಿದೆ.

ಕಟ್ಟಡ ಗುತ್ತಿಗೆದಾರ ಪ್ರದೀಪ್ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ. ಕಾರಿನಲ್ಲಿ ಕಾಫಿ ತೋಟಕ್ಕೆ ಕೂಲಿ ಕಾರ್ಮಿಕರನ್ನು ಕರೆದೊಯ್ದು ಮನೆಗೆ ಊಟಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಘಟನೆ ನಡೆಯುವ ಕೆಲ ನಿಮಿಷಗಳ ಹಿಂದಷ್ಟೇ ಪ್ರದೀಪ್ ಕಾರಿನಿಂದ ಇಳಿದು ಮನೆಗೆ ತೆರಳಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರ ಬಿದ್ದಿದ್ದರಿಂದ ಚಿಕ್ಕಮಗಳೂರು – ಶೃಂಗೇರಿ ನಡುವಿನ ರಸ್ತೆ ಸಂಚಾರ ಸಮಾರು ಒಂದು ಗಂಟೆಗೂ ಹೆಚ್ಚಿನ ಕಾಲ ಸ್ಥಗಿತಗೊಂಡು ವಾಹನ ಸವಾರರು ಪರದಾಡುವಂತಾಗಿತ್ತು.

ಮಂಗಳವಾರ ಮಧ್ಯಾಹ್ನದಿಂದಲೇ ಮೂಡಿಗೆರೆ, ಶೃಂಗೇರಿ, ಬಾಳೆಹೊನ್ನೂರು, ಗೋಣಿಬೀಡು ಸುತ್ತಮುತ್ತ ವ್ಯಾಪಕ ಮಳೆಯಾಗಿದೆ. ಮಲೆನಾಡಿನಲ್ಲಿ ಕಳೆದ ಮೂರು ದಿನದಿಂದ ನಿರಂತರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲವೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮೇ 26ಕ್ಕೆ ಎದ್ಧೇಳು ಕರ್ನಾಟಕ ಅಭಿನಂದನಾ ಸಮಾರಂಭ; ದೊರೆಸ್ವಾಮಿ ಅವರಿಗೆ ಗೌರವ

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...