ಅತಿವೃಷ್ಟಿ ಹಾನಿ | ಔರಾದ ಕ್ಷೇತ್ರಕ್ಕೆ ವಿಶೇಷ ಅನುದಾನ ಕೊಡಿ : ಅಧಿವೇಶನದಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

Date:

ಬೀದರ್‌ ಜಿಲ್ಲೆಯ ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ಭಾರಿ ಮಳೆಯಿಂದ ಅತಿವೃಷ್ಟಿಯಾಗಿದ್ದು, ಕೆರೆ-ಕಟ್ಟೆಗಳು ಒಡೆದಿದ್ದು, ರಸ್ತೆ, ಸೇತುವೆ, ಜಾನುವಾರುಗಳು ಕೊಚ್ಚಿ ಹೋಗಿವೆ. ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡಬೇಕೆಂದು ಮಾಜಿ ಸಚಿವ, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ ಅವರು ಸರ್ಕಾರಕ್ಕೆ ಒತ್ತಾಯಿಸಿದರು.

ಮುಂಗಾರು ಅಧಿವೇಶನದಲ್ಲಿ ಬುಧವಾರ ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕರು, ʼಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮಳೆ ಔರಾದ(ಬಿ) ಕ್ಷೇತ್ರದಲ್ಲಾಗಿದೆ. ಒಂದೇ ದಿನ 300 ಮಿ.ಮಿ. ಮಳೆ ದಾಖಲಾಗಿದ್ದು, ಸುಮಾರು 30-40 ಜಾನುವಾರುಗಳು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮ‌ನೆಗಳು ಕುಸಿದು ಬಿದ್ದಿವೆʼ ಎಂದು ವಿವರಿಸಿದರು.

ʼರೈತರು ಬೆಳೆದ ಉದ್ದು, ಹೆಸರು, ಸೋಯಾಬೀನ್, ತೊಗರಿ, ಹತ್ತಿ ಸೇರಿದಂತೆ ಎಲ್ಲ ಬೆಳೆಗಳು‌ ನೀರಿನಲ್ಲಿ ಮುಳುಗಡೆಯಾಗಿವೆ. ಭಾರಿ ಮಳೆಯಿಂದಾಗಿ ಕ್ಷೇತ್ರದಲ್ಲಿ ಅಂದಾಜು 10 ಸಾವಿರ ಎಕರೆ ಬೆಳೆ ನಷ್ಟವಾಗಿದ್ದು, ರೈತರು ಕಂಗಾಲಾಗಿದ್ದಾರೆ. ರಸ್ತೆ, ಸೇತುವೆ, ಕೆರೆಗಳು ಒಡೆದಿರುವುದರಿಂದ ಜನತೆ ತೊಂದರೆ ಅನುಭವಿಸುತ್ತಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಔರಾದ್‌, ಕಮಲನಗರ ತಾಲೂಕಿನ ಚಿಕ್ಲಿ,‌ ನಂದಿ‌ ಬಿಜಲಗಾಂವ, ಬೋಂತಿ, ದಾಬಕಾ, ನಾಗಮಾರಪಳ್ಳಿ ಸೇರಿದಂತೆ ಎಲ್ಲ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾಕಷ್ಟು ಹಾನಿಯಾಗಿದೆ‌. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳಿಗೆ ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆʼ ಎಂದರು.

ಇದನ್ನೂ ಓದಿ : ಬೀದರ್‌ | ಸೋರುತಿಹದು ನಿಟ್ಟೂರ(ಬಿ) ನಾಡ ಕಚೇರಿ, ಆವರಣದಲ್ಲಿ ಮಳೆ ನೀರು!

ರಾಜ್ಯದ ಗಡಿ ತಾಲ್ಲೂಕು ಮತ್ತು ಹಿಂದುಳಿದ ಪ್ರದೇಶವಾಗಿದ್ದು, ಮುಖ್ಯಮಂತ್ರಿಗಳು ಔರಾದ(ಬಿ) ಕ್ಷೇತ್ರವನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಿಸಿ ವಿಶೇಷ ಅನುದಾನ ಒದಗಿಸಬೇಕೆಂದು ಸರ್ಕಾರಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...