ಬೀದರ್‌ ಜಿಲ್ಲೆಯಲ್ಲಿ ಅತಿವೃಷ್ಟಿ | ₹100 ಕೋಟಿ ವಿಶೇಷ ಪರಿಹಾರ ಕೊಡಿ : ಸಿಎಂಗೆ ಈಶ್ವರ ಖಂಡ್ರೆ ಮನವಿ

Date:

ಬೀದರ್ ಜಿಲ್ಲೆಯಾದ್ಯಂತ ಆಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆಯಾಗಿ ಬೆಳೆ, ಮನೆ, ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ₹100 ಕೋಟಿ ವಿಶೇಷ ಪರಿಹಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಶನಿವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವರು, ʼಜಿಲ್ಲಾದ್ಯಂತ ಸಾವಿರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ಹೆಸರು, ಉದ್ದು, ಸೋಯಾ, ತೊಗರಿ ಸೇರಿದಂತೆ ಹಲವು ಬೆಳೆ ನಾಶವಾಗಿದ್ದು, ನೂರಾರು ಮನೆಗಳು ಹಾನಿಗೊಳಗಾಗಿವೆ, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ದವಸ ಧಾನ್ಯವೂ ನೀರು ಪಾಲಾಗಿದೆ, ಜೊತೆಗೆ ಕೆಲವು ಸಂಪರ್ಕ ಸೇತುವೆಗಳು ಕೊಚ್ಚಿಹೋಗಿದ್ದು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಕಡಿತವಾಗಿದೆʼ ಎಂದು ತಿಳಿಸಿದರು.

‘ಜಿಲ್ಲಾಡಳಿತದ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್ ನಿಯಮಾವಳಿಯಂತೆ ಸಮೀಕ್ಷೆ ನಡೆಸಿದ್ದು, ಪ್ರಾಥಮಿಕ ಅಂದಾಜಿನಂತೆ ಸುಮಾರು ₹500 ಕೋಟಿ ನಷ್ಟ ಸಂಭವಿಸಿದೆ. ಮೊದಲೇ ಹಿಂದುಳಿದಿರುವ ಬೀದರ್ ಜಿಲ್ಲೆ ಈ ಅನಾಹುತಕಾರಿ ಮಳೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ರೈತರು, ಬಡಜನರು, ಕೂಲಿಕಾರ್ಮಿಕರು ಆಂತಕದಲ್ಲಿ ಕಾಲ ಕಳೆಯುವಂತಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ನೊಂದ ಜನರ ನೆರವಿಗೆ ಬರುವಂತೆʼ ಅವರು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ | ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...