ರಾಜ್ಯದ 13 ಜಿಲ್ಲೆಗಳಲ್ಲಿ ನ.9 ಮತ್ತು 10 ರಂದು ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Date:

ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜತೆಗೆ ತಂಪು ವಾತಾವರಣವಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನ.9 ಮತ್ತು 10 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

“ನ.9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಧಾರವಾಡ, ಮಂಡ್ಯ, ಬಳ್ಳಾರಿ, ರಾಯಚೂರು, ಕಲಬುರಗಿ, ವಿಜಯಪುರ, ದಾವಣಗೆರೆ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಉಳಿದಂತೆ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ” ಎಂದು ಹೇಳಿದೆ.

“ರಾಜ್ಯದಲ್ಲಿ ನ.10 ರಂದು ಮಳೆಯ ಪ್ರಮಾಣ ಕಡಿಮೆಯಾಗಲಿದೆ. ತುಮಕೂರು, ದಾವಣಗೆರೆ, ಶಿವಮೊಗ್ಗ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ” ಇದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಈ ಭಾಗಗಳಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ದೀಪಾವಳಿ ಹಬ್ಬ | ಬೆಂಗಳೂರು – ಭಗತ್ ಕಿ ಕೋಠಿ ನಡುವೆ ವಿಶೇಷ ರೈಲುಗಳ ಸಂಚಾರ

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಹವಾಮಾನ ಇಲಾಖೆ ತಜ್ಞ ಪ್ರಸಾದ್, “ನ.8 ರಂದು ಕರಾವಳಿ, ದಕ್ಷಿಣ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಈ ಹಿನ್ನೆಲೆ, ಇಂದು ಚಳಿಯ ವಾತಾವರಣ ಇದೆ. ಮಳೆಯ ಪ್ರಮಾಣ ಹೆಚ್ಚಾದ ಕಾರಣ ವಾಡಿಕೆಗಿಂತ ಗರಿಷ್ಠ ಉಷ್ಣಾಂಶ ಕಡಿಮೆಯಿದೆ. ಆದ್ದರಿಂದ ಚಳಿಯ ವಾತಾವರಣ ಇದೆ. ನ.9 ರಂದು ರಾಜ್ಯದ ಕೆಲವೆಡೆ ಮಳೆಯ ಪ್ರಮಾಣ ಹೆಚ್ಚಾಗಿದೆ. ನ.10 ರಂದು ಮಳೆಯ ಪ್ರಮಾಣ ಕಡಿಮೆಯಾಗುತ್ತ ಹೋಗುತ್ತದೆ. ನ.11 ರಿಂದ ಮಳೆ ಇರುವುದಿಲ್ಲ” ಎಂದು ಹೇಳಿದರು.

“ಇಡೀ ರಾಜ್ಯದಲ್ಲಿ ಕರಾವಳಿ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ನ.12ರಿಂದ ಎರಡು ಮೂರು ದಿನ ಒಣಹವೆ ಇರುತ್ತದೆ. ಆ ಬಳಿಕ ರಾಜ್ಯದ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್‌ಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನವೆಂಬರ್‌ ವಾಡಿಕೆ ಮಳೆ 64 ಮಿ.ಮೀ ಇದೆ. ನ.1 ರಿಂದ ನ.8ವರೆಗೂ 107 ಮಿ.ಮೀ ಮಳೆಯಾಗಿದೆ. ಅಕ್ಟೋಬರ್‌ನಲ್ಲಿ ಬೆಂಗಳೂರಿನಲ್ಲಿ ಮಳೆ ಕೊರತೆ ಎದುರಾಗಿತ್ತು. ಇದೀಗ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...