ಕಲಬುರಗಿ | ಭಾರೀ ಮಳೆ: ಸೇಡಂ ಪೊಲೀಸ್ ಠಾಣೆ ಜಲಾವೃತ

Date:

  • ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಠಾಣೆಗೆ ನುಗ್ಗಿದ ನೀರು.
  • ಅಗ್ನಿಶಾಮಕ, ಠಾಣೆಯ ಪೊಲೀಸರು ಹರಸಾಹಸಪಟ್ಟು ಸಂಗ್ರಹವಾದ ನೀರು ಹೊರತೆಗೆದಿದ್ದಾರೆ.

ಕಳೆದ ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಪೊಲೀಸ್ ಠಾಣೆಗೆ ನೀರು ನುಗ್ಗಿ ಸಂಪೂರ್ಣ ಜಲವೃತಗೊಂಡಿದ್ದು, ಪೊಲೀಸರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತ ಶೇಖರ್ ಸೇಡಂ ಈದಿನ.ಕಾಮ್‌ ದೊಂದಿಗೆ ಮಾತನಾಡಿ, “ಮೂರು ವರ್ಷಗಳ ಹಿಂದೆ ಇದೇ ರೀತಿ ಮಳೆ ಸುರಿದಾಗ ಠಾಣೆಯಲ್ಲಿ ನೀರು ನುಗ್ಗಿತ್ತು, ನಾನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕಿದ್ದೇನೆ, ಅಷ್ಟೇ ಅಲ್ಲದೆ ಎಲ್ಲಾ ಅಧಿಕಾರಗಳ ಗಮನಕ್ಕೂ ತಂದು ಪೊಲೀಸ್ ಠಾಣೆ ಬೇರೆಯೆಡೆಗೆ ಸ್ಥಳಾಂತರಿಸಿ ಎಂದು ಮನವಿ ಮಾಡಿದ್ದೇನೆ. ಆದರೆ ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಈಗಲಾದರೂ ಸಂಬಂಧಪಟ್ಟ ಮೇಲಾಧಿಕಾರಿಗಳು ಠಾಣೆಯನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು” ಎಂದು ಒತ್ತಾಯಿಸಿದರು.

ಈ ಸಂಬಂಧ ಠಾಣೆಯ ಪಿಎಸ್‌ ಐ ಮಂಜುನಾಥ ರೆಡ್ಡಿ ಈದಿನ.ಕಾಮ್‌ ದೊಂದಿಗೆ ಮಾತನಾಡಿ, ” ಹೆಚ್ಚು ಮಳೆಯಾದರೆ ಸಾಕು ಠಾಣೆ ಪಕ್ಕದ ಗಟಾರ್‌ ನೀರು ಠಾಣೆಯೊಳಗೆ ನುಗ್ಗುತ್ತವೆ, ನಿನ್ನೆ ಠಾಣೆಯೊಳಗೆ ನೀರು ಸಂಗ್ರಹವಾಗಿತ್ತು. ಕಚೇರಿಯ ಟೇಬಲ್‌, ಕುರ್ಚಿ ಹಾಳಾಗಿವೆ, ಯಾವುದೇ ಕಾಗದ ಪತ್ರ ದಾಖಲೆಗಳಿಗೆ ಹಾನಿಯಾಗಿಲ್ಲ. ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಬೇರೆ ಕಡೆಗೆ ಸ್ಥಳಾಂತರ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ. ಆದರೆ ಇನ್ನೂ ಆಗಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಠಾಣೆಯ ಪೊಲೀಸರು ಹರಸಾಹಸಪಟ್ಟು ಸಂಗ್ರಹವಾದ ನೀರು ಹೊರತೆಗೆದಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ

ಸಾರ್ವಜನಿಕರಿಗೆ ರಕ್ಷಣೆ ಒದಗಿಸುವ ಪೊಲೀಸ ಸಿಬ್ಬಂದಿ ತಮ್ಮ ಠಾಣೆಗೆ ನೀರು ನುಗ್ಗಿದ ಪರಿಣಾಮ ಹೈರಾಣಾಗುತ್ತಿರುವುದು ಪ್ರತಿವರ್ಷ ಮರುಕಳಿಸಿದರೂ ಮೇಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸದೇ ಇರುವುದು ವಿಪರ್ಸಯಾಸ ವಿಪರ್ಯಾಸವೇ ಸರಿ ಎನ್ನುವುದು ಪ್ರಜ್ಞಾವಂತ ನಾಗರಿಕರ ಅಭಿಪ್ರಾಯ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...