ರಾಜ್ಯಾದ್ಯಂತ ಭಾರೀ ಮಳೆ: ಅವಧಿಗೂ ಮುನ್ನ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ

Date:

ಕಳೆದ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ಮುಂಗಾರು ತೀವ್ರವಾಗಿದ್ದು, ಮುಂಗಾರಿಗೂ ಮೊದಲೇ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಆಗಮನದಿಂದಾಗಿ ಕೆರೆ, ಕುಂಟೆ, ಹಳ್ಳ-ಕೊಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಜತೆಗೆ ಜೂನ್‌ 26 ರವರೆಗೆ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯಾದ್ಯಂತ ಮಳೆ ಮತ್ತು ಬಿರುಗಾಳಿ ಮುಂದುವರಿಯುವ ಮುನ್ಸೂಚನೆಯನ್ನು ಕೂಡ ಐಎಂಡಿ ನೀಡಿದೆ. ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಭಾರೀ ಮಳೆಗೆ ಜಲಾಶಯದ ಒಳಹರಿವು ಹೆಚ್ಚಾಗಿದೆ.

ಭಾರೀ ಮಳೆಯಿಂದ ಭದ್ರಾ, ಹಾರಂಗಿ, ಕಬಿನಿ, ಕೆಆರ್‌ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಭದ್ರಾ ಜಲಾಶಯ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ, ಜಲಾಶಯಕ್ಕೆ ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಎಂಬುದನ್ನು ಗಮನಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಉತ್ತಮ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಕೆ‌ಆರ್‌ಎಸ್ ಜಲಾಶಯಕ್ಕೆ ಅಧಿಕ ನೀರು ಹರಿದು ಬರುತ್ತಿದೆ. ಕೆ‌ಆರ್‌ಎಸ್ ಜಲಾಶಯ ಈಗಾಗಲೇ ಭರ್ತಿಯ ಅಂಚಿಗೆ ತಲುಪಿದ್ದು, ಈ ವರ್ಷ ಕೆ‌ಆರ್‌ಎಸ್ ಜಲಾಶಯ ಜುಲೈ ತಿಂಗಳಿನಲ್ಲೇ ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿದೆ.

ಕೆಆರ್‌ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟ 38.04 ಮೀ.ನಷ್ಟಿದ್ದು, ಒಟ್ಟು ಸಾಮರ್ಥ್ಯ 49.45ರಷ್ಟಿದೆ. ಇಂದಿನ ವರ್ಷ ನೀರಿನ ಮಟ್ಟ 14.56 ಟಿಎಂಸಿಯಷ್ಟಿದ್ದು, ಕಳೆದ ವರ್ಷದ 10.14 ಟಿಎಂಸಿಯಷ್ಟು ನೀರು ಸಂಗ್ರಹವಾಗಿತ್ತು. ಇದೀಗ 1413 ಕ್ಯೂಸೆಕ್‌ನಷ್ಟು ಒಳಹರಿವು ಇದ್ದು, 798 ಕ್ಯೂಸೆಕ್‌ ಹೊರಹರಿವು ಇದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಕೊರತೆಗಳ ಮೆಟ್ಟಿ ನಿಂತ ಸರ್ಕಾರಿ ಶಾಲೆ; ಸತತ 8 ವರ್ಷಗಳಿಂದ ಶೇ.100ರಷ್ಟು ಫಲಿತಾಂಶ

ಆಲಮಟ್ಟಿ ಜಲಾಶಯ ಗರಿಷ್ಟ ನೀರಿನ ಮಟ್ಟ 519.60 ಮೀ.ನಷ್ಟಿದ್ದು, ಒಟ್ಟು ಸಾಮರ್ಥ್ಯ 123.08 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 29.42 ಟಿಎಂಸಿಯಷ್ಟಿದ್ದು, ಕಳೆದ ವರ್ಷ 19.92 ಟಿಎಂಸಿಯಷ್ಟು ನೀರು ಸಂಗ್ರಹವಾಗಿತ್ತು. ಇದೀಗ 3,715 ಕ್ಯೂಸೆಕ್‌ನಷ್ಟು ಒಳಹರಿವು ಇದ್ದು, 430 ಕ್ಯೂಸೆಕ್‌ನಷ್ಟು ಹೊರಹರಿವು ಇದೆ.

ಅಂತೆಯೇ ಉಳಿದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ಕೋಷ್ಟಕದಲ್ಲಿ ಕಾಣಬಹುದು.

ಕರ್ನಾಟಕದ ಪ್ರಮುಖ ಜಲಾಶಯಗಳು (Dam)ಗರಿಷ್ಠ ನೀರಿನ ಮಟ್ಟ (ಮೀ)ಒಟ್ಟು ಸಾಮರ್ಥ್ಯ (ಟಿಎಂಸಿ)ಇಂದಿನ ನೀರಿನ ಮಟ್ಟ (ಟಿಎಂಸಿ)ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ)ಒಳಹರಿವು (ಕ್ಯೂಸೆಕ್ಸ್)ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam)519.60123.0829.4219.923715430
ತುಂಗಭದ್ರಾ ಜಲಾಶಯ (Tungabhadra Dam)497.71105.795.574.216382026
ಮಲಪ್ರಭಾ ಜಲಾಶಯ (Malaprabha Dam)633.8037.736.437.160194
ಕೆ.ಆರ್.ಎಸ್ (KRS Dam)38.0449.4514.5610.141413798
ಲಿಂಗನಮಕ್ಕಿ ಜಲಾಶಯ (Linganamakki Dam)554.44151.7513.9711.3024971686
ಕಬಿನಿ ಜಲಾಶಯ (Kabini Dam)696.1319.529.014.30910408
ಭದ್ರಾ ಜಲಾಶಯ (Bhadra Dam)657.7371.5415.2224.97875343
ಘಟಪ್ರಭಾ ಜಲಾಶಯ (Ghataprabha Dam)662.9151.007.954.12545119
ಹೇಮಾವತಿ ಜಲಾಶಯ (Hemavathi Dam)890.5837.1010.8214.611376250
ವರಾಹಿ ಜಲಾಶಯ (Varahi Dam)594.3631.103.062.334570
ಹಾರಂಗಿ ಜಲಾಶಯ (Harangi Dam)​​871.388.503.282.59289200
ಸೂಫಾ (Supa Dam)564.00145.3330.4232.6441712054
ನಾರಾಯಣಪುರ ಜಲಾಶಯ (Narayanpura Dam)492.2515.8721.1614.78235235
ವಾಣಿವಿಲಾಸ ಸಾಗರ (VaniVilas Sagar Dam)652.2430.4218.2325.060147

ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಲುನಲ್ಲಿ ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 95 ಮಿಮೀ ಮಳೆಯಾಗಿದೆ. ಜೂನ್ 22ರಿಂದ ಜೂನ್ 30ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಚದುರಿದ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಹಿಂದೆ ಕೆಆರ್‌ಎಸ್‌ ಜಲಾಶದ ಬಳಿ ‘ಟ್ರಯಲ್ ಬ್ಲಾಸ್ಟ್’ ನಡೆಸಲು ಮುಂದಾಗಿದ್ದನ್ನು ರೈತರು ಹೋರಾಟದ ಮೂಲಕ ತಡೆದಿದ್ದರು. ಈಗ ಅಮ್ಯೂಸ್‌ಮೆಂಟ್ ಪಾರ್ಕ್‌ಗಾಗಿ ಆಳವಾದ ದೊಡ್ಡ ಗುಂಡಿಗಳನ್ನು ತೋಡಲು ಮುಂದಾಗಿದ್ದಾರೆ. ಅಲ್ಲದೆ ಈಗಾಗಲೇ ಕೆಆರ್‌ಎಸ್‌ ಜಲಾಶಯ ಅವಧಿಗು ಮುನ್ನವೇ ಭರ್ತಿಯಾಗಿದೆ. ಇದೀಗ ಅಣೆಕಟ್ಟು ಪ್ರದೇಶದಲ್ಲಿ ಕಾಮಗಾರಿಗಳು ನಡೆದು ಶಿಲಾ ಪದರದ ಮೇಲೆ ನಿಂತಿರುವ ಕೆಆರ್‌ಎಸ್ ಅಣೆಕಟ್ಟೆ ಕಂಪಿಸಿದರೆ ಅನಾಹುತಕ್ಕೆ ಕಾರಣವಾಗಬಹುದು ಎಂಬುದು ಸ್ಥಳೀಯ ರೈತರ ಆತಂಕಕ್ಕೂ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...