ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

Date:

ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ಕರೆ, ಕಟ್ಟೆ, ಜಲಾಶಯಗಳು ತುಂಬುತ್ತಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ, ಮನೆಗಳಿಗೆ ಹಾನಿಯಾಗಿದೆ. ಬೆಳೆ ನಷ್ಟವೂ ಆಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರವೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಉತ್ತರ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಕೆಲ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿಯೂ ಮಳೆ ಬೀಳಲಿದೆ ಎಂದು ಇಲಾಖೆ ಹೇಳಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಮೂರು ದಿನಗಳ ಕಾಲ (ಜುಲೈ 13, 14, 15) ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳು ಹಾಗೂ ದಕ್ಷಿಣದ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...