ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಂಗಳವಾರ ಸಂಜೆ ಬಿರುಸಿನ ಮಳೆಯಾಯಿತು.
ಜಿಲ್ಲೆಯ ಔರಾದ್, ಹುಮನಾಬಾದ್, ಭಾಲ್ಕಿ ಸೇರಿದಂತೆ ನಾನಾ ಕಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಎಡೆಬಿಡದೆ ಸುರಿಯಿತು.
ಸೋಮವಾರದಿಂದ ಮೋಡ ಕವಿದ ವಾತಾವರಣವಿದ್ದು ತಣ್ಣನೆಯ ಗಾಳಿ ಬೀಸುತ್ತಿದೆ. ಸೋಮವಾರ ನಸುಕಿನ ಜಾವ ಕೆಲವೆಡೆ ವರ್ಷಧಾರೆ ಆಗಿದೆ. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣ ಇತ್ತು. ನಂತರ ಮಳೆಯ ಕಣ್ಣಾಮುಚ್ಚಾಲೆ ಆಡುತ್ತಿದೆ.
ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಭರದಿಂದ ಸಾಗಿದ್ದು, 1.51 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿಯಿದೆ. ಈಗಾಗಲೇ ಕೆಲವೆಡೆ ಶೇ 50ರಷ್ಟು ಬಿತ್ತನೆ ಪೂರ್ಣಗೊಂಡಿದೆ. ಇನ್ನೂ ಕೆಲವೆಡೆ ಸೋಯಾಅವರೆ ರಾಶಿ ಮಾಡುವ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ : ಬೀದರ್ | ಯಾವ ಹುದ್ದೆಗೂ ಸಲ್ಲಿಕೆಯಾಗದ ನಾಮಪತ್ರ : ಪತ್ರಕರ್ತರ ಸಂಘಕ್ಕೆ ಪುನಃ ಚುನಾವಣೆ





