ರಾಜ್ಯದ ಕೆಲವೆಡೆ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Date:

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಕಡಿತ, ಸಣ್ಣ ಪ್ರಮಾಣದಲ್ಲಿ ಸಂಚಾರ ದಟ್ಟಣೆ, ಅಣ್ಣಪುಟ್ಟ ಹಾನಿ ಉಂಟಾಗುವ ಸಾಧ್ಯತೆ ಇದೆ. ಮರದ ಕೊಂಬೆಗಳು ಮುರಿಯುವಂತೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಡುಗು ಸಹಿತ ಭಾರೀ ಮಳೆಯಾಗುವ ಹಿನ್ನೆಲೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆಗಳನ್ನು ನೀಡಿದ್ದು, “ಮನೆಯೊಳಗೆ ಇರಿ, ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿ, ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ, ಮರಗಳ ಕೆಳಗೆ ನಿಲ್ಲಬೇಡಿ ಸುರಕ್ಷಿತ ಆಶ್ರಯ ಪಡೆದುಕೊಳ್ಳಿ, ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ, ವಿದ್ಯುತ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಪ್ಲಗ್ ಆಫ್ ಮಾಡಿ, ಕೂಡಲೇ ಜಲಮೂಲಗಳಿಂದ ಹೊರಬನ್ನಿ, ವಿದ್ಯುತ್‌ ಉಪಕರಣಗಳಿಂದ ದೂರವಿರಿ, ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ” ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಬಿಸಿಲಿನ ಝಳಕ್ಕೆ ತಂಪೆರೆದ ಮಳೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...