ರಾಜ್ಯದ ಕೆಲವೆಡೆ ಭಾರೀ ಮಳೆ; ಸಿಡಿಲು ಬಡಿದು ಮಹಿಳೆ, ಜಾನುವಾರು ಸಾವು

Date:

ಬಾಗಲಕೋಟೆ ತಾಲೂಕಿನ ಬೊಡನಾಯಕನದಿನ್ನಿಯಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಸಿಡಿಲು ಬಡಿದು ಭಾರತಿ(41) ಎಂಬುವವರು ಮೃತಪಟ್ಟಿದ್ದಾರೆ. ಹೊಲದ ಕೆಲಸ ಮುಗಿಸಿ, ಮನೆಗೆ ಮರಳುತ್ತಿದ್ದ ವೇಳೆ ಸಿಡಿಲು ಬಡಿದಿದೆ.

ಬಾಗಲಕೋಟೆ ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆಯಾಯಿತು.

ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಇಟಗಿ ಗ್ರಾಮದ ಹೊಲದಲ್ಲಿ ಸಿಡಿಲು ಬಡಿದು 8 ಆಡು ಮತ್ತು 4 ಕುರಿಗಳು ಮೃತಪಟ್ಟಿವೆ. 6 ಕುರಿಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆಯಾಗಿದೆ. ಕಂಪ್ಲಿ ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಕೊಯ್ಲಿಗೆ ಸಿದ್ದವಾಗಿದ್ದ ಹಿಂಗಾರು ಭತ್ತದ ಬೆಳೆ ಮಣ್ಣು ಪಾಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ಸಂಜೆ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆಯಾಗಿದ್ದು, ಪುತ್ತೂರು, ಕಡಬ ತಾಲೂಕಿನ ಉಪ್ಪಿನಂಗಡಿ, ಕೊಯಿಲ, ಆಲಂಕಾರು, ನೆಲ್ಯಾಡಿ, ಸುಳ್ಯ ತಾಲೂಕಿನ ಬಳ್ಪ, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ, ಮಡಂತ್ಯಾರ್‌, ನೆರಿಯ, ಕಕ್ಕಿಂಜೆ, ಬಂದಾರು ಪರಿಸರದಲ್ಲಿ ಬಿರುಸಿನ ಮಳೆ ಸುರಿದಿದೆ.

ಈ ಸುದ್ದಿ ಓದಿದ್ದೀರಾ? ಗುಡುಗು ಸಹಿತ ಮಳೆ ಮುಂದುವರಿಕೆ; 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಣೆ

ಕೊಡಗು ಜಿಲ್ಲೆಯ ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಶನಿವಾರ ಬಿರುಸಿನ ಮಳೆ ಸುರಿಯಿತು. ಸುಮಾರು 45 ನಿಮಿಷಗಳ ಕಾಲ ಮಳೆಯಾಯಿತು. ಸಿದ್ದಾಪುರದಲ್ಲಿ ಹಗುರ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ಬೇಸತ್ತಿದ್ದ ಜನರು ಹರ್ಷಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...