ಕರಾವಳಿ, ಒಳನಾಡಿನ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Date:

ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು ಆಗಸ್ಟ್ 20ರ ಭಾನುವಾರ ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೀದರ್, ವಿಜಯಪುರ, ಹಾವೇರಿ ಹಾಗೂ ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದ್ದು, ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೈರುತ್ಯ ಮುಂಗಾರು ಕರ್ನಾಟಕದಲ್ಲಿ ಸಾಮಾನ್ಯವಾಗಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ರಾಜ್ಯದಲ್ಲಿ ಅತ್ಯಂತ ಗರಿಷ್ಠ ಮಳೆ ಉಡುಪಿ ಜಿಲ್ಲೆಯ ಕೋಟದಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ.

ಆಗಸ್ಟ್ 19ರ ಬೆಳಿಗ್ಗೆ 8.30ರ ವರೆಗೆ ದಾಖಲಾಗಿರುವ ವರದಿಯ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ 6 ಸೆಂ ಮೀ, ಉಡುಪಿ ಜಿಲ್ಲೆಯ ಕುಂದಾಪುರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣ, ಉತ್ತರ ಕನ್ನಡ ಜಿಲ್ಲೆಯ ಮಂಕಿ ಹಾಗೂ ಉಡುಪಿಯಲ್ಲಿ ತಲಾ 5 ಸೆಂ ಮೀ, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಪಣಂಬೂರು, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್, ಗೆರೆಸೊಪ್ಪ, ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ತಲಾ 4 ಸೆಂ ಮೀ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಗೋಕರ್ಣ, ಕದ್ರಾ, ಶಿರಾಲಿ, ಕುಮಟಾ, ಉಡುಪಿ ಜಿಲ್ಲೆಯ ಕಾರ್ಕಳ, ಸಿದ್ದಾಪುರ, ಕೊಲ್ಲೂರು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಉಪ್ಪಿನಂಗಡಿ, ಮಂಗಳೂರು, ಕೊಡಗು ಜಿಲ್ಲೆಯ ಭಾಗಮಂಡಲ, ಸೋಮವಾರಪೇಟೆ, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ, ಜಯಪುರ, ಕೊಪ್ಪ, ಶೃಂಗೇರಿ ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ, ಧಾರವಾಡ ಜಿಲ್ಲೆಯ ಅಣ್ಣಿಗೆರೆ, ಬೀದರ್ ಜಿಲ್ಲೆಯ ಸಾಂತಾಪುರ, ಬೆಳಗಾವಿ ಜಿಲ್ಲೆಯ ಹಿಡಕಲ್‌ನಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 19ರ ಶನಿವಾರದಂದು ಜೋರು ಮಳೆಯಾಗಿದೆ. ಹೆಬ್ಬಾಳ, ಶಿವಾಜಿನಗರ, ಕಲ್ಯಾಣನಗರ, ನಾಗವಾರ, ಮೇಕ್ರಿ ಸರ್ಕಲ್, ಸದಾಶಿವನಗರ, ಆನಂದರಾವ್ ಸರ್ಕಲ್, ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಕಾರ್ಫೋರೇಷನ್, ಎಂಜಿ ರೋಡ್ ಸೇರಿದಂತೆ ಹಲವೆಡೆ ಮಳೆ ಬಿದ್ದಿದೆ.

ಕಳೆದ 20 ದಿನಗಳಿಂದ ರಾಜ್ಯದಲ್ಲಿ ಮಳೆಯಾಗಿರಲಿಲ್ಲ. ಪರಿಣಾಮವಾಗಿ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗಿತ್ತು. ಈಗ ಸ್ವಲ್ಪ ತಂಪಾಗಿದೆ. ಮಳೆ ಬಾರದ ಹಿನ್ನೆಲೆಯಲ್ಲಿ ಬಿತ್ತನೆ ಕುಂಠಿತವಾಗಿತ್ತು. ಇದೀಗ ಮಳೆಯಿಂದಾಗಿ ರೈತರ ಮುಖದಲ್ಲಿ ಮಂದಹಾಸ ಬೀರಿದ್ದು, ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...