ಮಂಗಳೂರು | ಇ-ಖಾತಾ, ಇ-ಸ್ವತ್ತು ತ್ವರಿತವಾಗಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

Date:

ಮಂಗಳೂರು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‍ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದರು. ಸಾರ್ವಜನಿಕರು ಕಟ್ಟಡ ನಿರ್ಮಾಣ, ನಿವೇಶನ ನಕ್ಷೆ ಮಂಜೂರಾತಿ ಸೇರಿದಂತೆ ವಿವಿಧ ಮಂಜೂರಾತಿಗಳಿಗೆ ಇ-ಖಾತಾ ಮತ್ತು ಇ-ಸ್ವತ್ತು ಅಗತ್ಯವಾಗಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ಇ-ಖಾತಾ ನೀಡಿಕೆ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ನಿಟ್ಟಿನಲ್ಲಿ ಇಂತಹ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಿಸಿದವರೊಂದಿಗೆ ಕ್ಷಿಪ್ರವಾಗಿ ಚರ್ಚಿಸಿ ಸಮಸ್ಯೆ ಪರಿಹರಿಸಲು ಸೂಚಿಸಿದರು.

ಪ್ರಸ್ತುತ ಇ-ಖಾತಾ ನೀಡಿಕೆ ಸಮಸ್ಯೆ ಬಗೆಹರಿದಿದ್ದು, ಫೆಬ್ರವರಿ ತಿಂಗಳಲ್ಲಿ 1058 ಇ-ಖಾತಾಗಳನ್ನು ನೀಡಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ಸಭೆಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾ ರಂಗಮಂದಿರ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಬೇಕು. ಬಂಟ್ವಾಳದಲ್ಲಿ ನಿರ್ಮಾಣಗೊಳ್ಳುತ್ತಿರುವ ಪಂಜ ಮಂಗೇಶರರಾಯ ಭವನ ತ್ವರಿತವಾಗಿ ಪೂರ್ಣಗೊಳಿಸಬೇಕು. ನಗರದ ಅತ್ತಾವರದಲ್ಲಿ ಕುದ್ಮುಲ್ ರಂಗರಾವ್ ಸಮಾಧಿ ಸ್ಥಳ ಅಭಿವೃದ್ಧಿಗೆ ಅರಣ್ಯ ತಕರಾರನ್ನು ಶೀಘ್ರದಲ್ಲಿ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.

ಗ್ರಾಮಾಂತರ ಪ್ರದೇಶದಲ್ಲಿ ವಿನ್ಯಾಸ, ನಕ್ಷೆ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಯೋಜನಾ ಪ್ರಾಧಿಕಾರಗಳು ಹೆಚ್ಚುವರಿ ಸಿಬ್ಬಂದಿಯನ್ನು ಬಳಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ತ್ಯಾಜ್ಯ ಶುದ್ಧೀಕರಣ ಘಟಕದಲ್ಲಿ ಶುದ್ಧೀಕರಣಗೊಂಡ ನೀರನ್ನು ಬೃಹತ್ ಕೈಗಾರಿಕೆಗಳು ಬಳಸುವಂತಾಗಲು ಸಂಬಂಧಿಸಿದ ಉದ್ಯಮಗಳೊಂದಿಗೆ ಮಾತುಕತೆ ನಡೆಸುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಥರ್ಡ್-ಪಾರ್ಟಿ ಪರಿಶೀಲನೆ ನಡೆಸುವಂತೆ ದಿನೇಶ್ ಗುಂಡೂರಾವ್ ಸೂಚಿಸಿದರು.

ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಾಣಗೊಂಡು ಕಾಮಗಾರಿ ಪೂರ್ಣಗೊಂಡಿರುವ ಹಾಸ್ಟೆಲ್ ಕಟ್ಟಡಗಳ ಉದ್ಘಾಟನೆಗೆ ಕಾಯದೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ, ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...