ಉಡುಪಿ | ನಾಪತ್ತೆಯಾಗಿದ್ದ ಕುಂದಾಪುರದ ವಿದ್ಯಾರ್ಥಿ ಮೃತದೇಹ, ನದಿ ತೀರದಲ್ಲಿ ಪತ್ತೆ !

Date:

ಗುರುವಾರ ಸಂಜೆ ಕಾಲೇಜಿನಿಂದ‌ ಮನೆಗೆ ಮರಳದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ ನಮೇಶ್ (17) ಮೃತ ವಿದ್ಯಾರ್ಥಿ.

ಗುರುವಾರ ಸಂಜೆ ಕಾಲೇಜು ಬಿಟ್ಟ ಬಳಿಕ ನವೇಶ್ ಮನೆಗೆ ವಾಪಾಸಾಗಿರಲಿಲ್ಲ. ಇತ್ತೀಚೆಗಷ್ಟೇ ತಂದೆ ಕೊಡಿಸಿದ್ದ ಐಫೋನ್ ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬೈಕ್‌ನಲ್ಲಿ ತೆರಳಿದ್ದ ನಮೇಶ್ ಹೆಮ್ಮಾಡಿ ಸಮೀಪದ‌ ಕನ್ನಡಕುದ್ರು ನದಿ ತೀರದಲ್ಲಿ ಬೈಕ್ ಹಾಗೂ ತನ್ನ ಕಾಲೇಜು ಬ್ಯಾಗ್ ಅನ್ನು ಬಿಟ್ಟು ನಾಪತ್ತೆಯಾಗಿದ್ದನು. ನಮೇಶ್ ರಾತ್ರಿಯಾದರೂ‌ ಮನೆಗೆ ಬಾರದಿದ್ದುದನ್ನು‌ ಗಮಿಸಿದ ಮನೆಯವರು ಕುಂದಾಪುರ‌ ನಗರ ಠಾಣೆಯಲ್ಲಿ ದೂರು ದಾಖಲಿಸಿ ಹುಡುಕಾಟ ಆರಂಭಿಸಿದ್ದರು. ಗುರುವಾರ ಪತ್ತೆಯಾಗದ ಕಾರಣ ಶುಕ್ರವಾರವೂ ಹುಟುಕಾಟ ಮುಂದಿವರೆಸಿದ್ದು, ಅಗ್ನಿಶಾಮಕ‌ದಳ ಹಾಗೂ ಗಂಗೊಳ್ಳಿಯ ಈಜುಪಟು ದಿನೇಶ್ ಖಾರ್ವಿ ಹಾಗೂ ಸ್ಥಳೀಯರು ಕನ್ನಡಕುದ್ರು ನದಿಯಲ್ಲಿ ಸಂಜೆಯ ತನಕವೂ ಹುಟುಕಾಟ ನಡೆಸಿದ್ದರು. ಶನಿವಾರ ಬೆಳಿಗ್ಗೆ ನಮೇಶ್‌ ಮೃತದೇಹ ಗಂಗೊಳ್ಳಿ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದ್ದು, ಸಾವಿಗೆ ಸ್ಪಷ್ಟ ಕಾರಣ ಏನೆಂಬುವುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...