ಸಿ ಟಿ ರವಿ ಅವರೇ ಇಲ್ಲಿದೆ ನೋಡಿ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ: ಸಿದ್ದರಾಮಯ್ಯ ಟ್ವೀಟ್

Date:

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಸಿ ಟಿ ರವಿ ಸವಾಲು ಹಾಕಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಫ್‌ಸಿಐ ಅಕ್ಕಿ ಕೊಡುವುದಾಗಿ ಹೇಳಿ, ಮತ್ತೆ ಇಲ್ಲ ಎಂದಿರುವ ಪತ್ರಗಳನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಸಿ ಟಿ ರವಿ ಅವರೇ ಇಲ್ಲಿದೆ ನೋಡಿ ಎಫ್‌ಸಿಐ ಕಮಿಟ್‌ಮೆಂಟ್ ಪತ್ರ. ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು” ಎಂದು ಕುಟುಕಿದ್ದಾರೆ.

“ಸಿ ಟಿ ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...